ಜುಲೈ 4ರಂದು ಬಿ.ಸಿ.ರೋಡಿನ ಉದಯ ಲಾಂಡ್ರಿಯ ಮಾಲೀಕ ಶರತ್ ಮಡಿವಾಳ (28) ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾದ ಪ್ರಕರಣಕ್ಕೆ ಸಂಬಂಧಿಸಿ ಅಬ್ದುಲ್ ಶಾಫಿ (36) ಖಲೀಲುಲ್ಲಾ (30) ಬಂಧನದ ಬಳಿಕ ಮತ್ತೆ ಮೂವರನ್ನು ವಶಕ್ಕೆ ತೆಗೆದುಕೊಂಡ ಕುರಿತು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಪಾರೆಂಕಿಯ ರಿಯಾಜ್, ನೆಲ್ಯಾಡಿಯ ಸಾದಿಕ್ ಮತ್ತು ಚಾಮರಾಜನಗರದ ಖಲೀಮುಲ್ಲಾ ಅವರನ್ನು ಗುರುವಾರ ಕೋರ್ಟಿಗೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಜಾಹೀರಾತು
ಇದರೊಂದಿಗೆ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ಒಟ್ಟು ಐವರನ್ನು ಬಂಧಿಸಿದಂತಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶರತ್ ಮಡಿವಾಳ ಹತ್ಯೆ: ಮತ್ತೆ ಮೂವರ ಬಂಧನ"