ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಉದ್ಯಮಿ ಸೇಸಪ್ಪ ಕೋಟ್ಯಾನ್ ಅವರೇ ಮುಂದುವರಿಯಬೇಕು ಎಂದು ತಾಲೂಕು ಸೇವಾ ಸಂಘದ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಆಗಸ್ಟ್ 6ರಂದು ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ, ಅಧ್ಯಕ್ಷರ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸದಿರಲು ನಿರ್ಣಯಿಸಲಾಯಿತು. ಈ ಬಗ್ಗೆ ಆಗಸ್ಟ್ 20ರಂದು ವಿಶೇಷ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಘದ ಅಧ್ಯಕ್ಷರ ರಾಜೀನಾಮೆ ಬಗ್ಗೆ ಚರ್ಚಿಸಲಾಗಿ, ಸಂಘದ ಸರ್ವ ಸದಸ್ಯರ ಅಪೇಕ್ಷೆಯಂತೆ ಮುಂದಿನ ಅವಧಿವರೆಗೆ ಸೇಸಪ್ಪ ಕೋಟ್ಯಾನ್ ಅವರನ್ನೇ ಮುಂದುವರಿಸುವುದೆಂದು ನಿರ್ಣಯ ಕೈಗೊಳ್ಳಲಾಯಿತು ಎಂದು ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸೇಸಪ್ಪ ಕೋಟ್ಯಾನ್ ಅಧ್ಯಕ್ಷರಾಗಿ ಮುಂದುವರಿಕೆ"