ಬಂಟ್ವಾಳ

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ದ.ಕ.ಜಿ.ಪಂಚಾಯತ್, ತಾ.ಪಂ.ಬಂಟ್ವಾಳ, ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಜನ ಒಕ್ಕೂಟ ಬಂಟ್ವಾಳ(ರಿ),ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ, ಎಸ್.ವಿ.ಎಸ್. ದೇವಳ ವಿದ್ಯಾ ಸಂಸ್ಥೆ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ಕ್ರೀಡಾಕೂಟವನ್ನು ಬಂಟ್ವಾಳ ಎಸ್.ವಿ.ಎಸ್. ದೇವಳ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ನೆರವೇರಿಸಿದರು.

ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಲಿಷ್ಟಗೊಳ್ಳಲು ಇಂತಹ ಕ್ರೀಡಾ ಕೂಟಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿದ್ದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ.ಬಂಗೇರ, ಪುರಸಭಾ ಸದಸ್ಯ ಜಗದೀಶ ಕುಂದರ್, ಯುವ ಜನ ಒಕ್ಕೂಟ ಬಂಟ್ವಾಳ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಕ್ಷೇತ್ರ ಶಿಕ್ಷಾಣಾಧಿಕಾರಿ ಲೋಕೇಶ್ ಸಿ, ಬಂಟ್ವಾಳ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಬಂಟ್ವಾಳ ದೈಹಿಕ ಪರಿವೀಕ್ಷಣಾಧಿಕಾರಿ ರತ್ನಾವತಿ ಎ, ವಿಟ್ಲ ಅಧ್ಯಾಪಕರ ಸಂಘದ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ಮತ್ತು ಶಿಕ್ಷಕ  ಪ್ರಮುಖರಾದ ಗಂಗಾದರ ರೈ ಮಾಣಿ, ಅಖಿಲ ಶೆಟ್ಟಿ, ಮಹಮ್ಮ್‌ದ್ ಮಂಚಿ, ಎಸ್.ವಿ.ಎಸ್. ದೇವಳ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕಿ ಮತ್ತಿತರರು ಉಪಸ್ಥಿತರಿದ್ದರು. ಬಂಟ್ವಾಳ ಸಹಾಯಕ ಯುವ ಜನ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್ ಪಿಎಸ್ ಸ್ವಾಗತಿಸಿದರು. ಬಂಟ್ವಾಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಬಾಳ್ತಿಲ ವಂದಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts