ಮಾಣಿ ಪೆರಾಜೆ ಗ್ರಾಮ ಸಹಾಯಕರಿಗೆ ಇಬ್ಬರು ನಿಂದಿಸಿ, ಜೀವ ಬೆದರಿಕೆ ಒಡ್ಡಿದ ಪ್ರಕರಣವನ್ನು ಬಂಟ್ವಾಳ ತಾಲೂಕು ಗ್ರಾಮ ಸಹಾಯಕರ ಸಂಘ ಖಂಡಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಿಯೋಗವೊಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಭೇಟಿ ಮಾಡಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ದ.ಕ. ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದ ಉಪಾಧ್ಯಕ್ಷ ಜನಾರ್ದನ, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ಸಿಬ್ಬಂದಿಗಳಾದ ಮಲ್ಲೇಶ್, ಮಹೇಂದ್ರ, ಗ್ರಾಮ ಕರಣಿಕರಾದ ಪ್ರಕಾಶ್, ಶಿವಾನಂದ ನಾಟೇಕರ್, ಪರೀಕ್ಷಿತ್ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಗ್ರಾಮ ಸಹಾಯಕ ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗ್ರಾಮ ಸಹಾಯಕರಿಗೆ ಜೀವ ಬೆದರಿಕೆ: ಸಂಘಟನೆ ಖಂಡನೆ"
Be the first to comment on "ಗ್ರಾಮ ಸಹಾಯಕರಿಗೆ ಜೀವ ಬೆದರಿಕೆ: ಸಂಘಟನೆ ಖಂಡನೆ"