ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ರಾಜ್ಯದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಭೇಟಿ ನೀಡಿ, ವಿದ್ಯಾಕೇಂದ್ರದ ಸಂಸ್ಥಾಪಕರಲ್ಲೋರ್ವ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರಕ್ಕೆ ಕೆಟ್ಟ ದಿನಗಳು ಕಾದಿವೆ ಎಂದು ಎಚ್ಚರಿಸಿದರು. ಕಲ್ಲಡ್ಕ ವಿದ್ಯಾಕೇಂದ್ರಕ್ಕೆ ತಾನು ಹಾಗೂ ಸ್ನೇಹಿತರ ಸಂಗ್ರಹರೂಪವಾದ 26 ಲಕ್ಷ ರೂಪಾಯಿಗಳನ್ನು ಕೊಡುಗೆ ರೂಪದಲ್ಲಿ ನೀಡುವುದಾಗಿ ಪ್ರಕಟಿಸಿದರು.
ಈ ಸಂದರ್ಭ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಸದಾನಂದ, ಪ್ರಮೋದ್ ಶೆಟ್ಟಿ, ಲಲ್ಲೇಶ್ ಶೆಟ್ಟಿ. ಸಂದೇಶ್ ಮತ್ತಿತರರು ಉಪಸ್ಥಿತರಿದ್ದರು.
video: