ಸಾರ್ವಜನಿಕ ಶ್ರೀ ಗಣೇಶೋತ್ಸವ ಅಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಆಶ್ರಯದಲ್ಲಿ ನಡೆದ 14ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವ, ಸಮಿತಿ ಗೌರವ ಅಧ್ಯಕ್ಷ ಬಿ.ರಮಾನಾಥ ರೈ ದೀಪ ಬೆಳಗಿಸಿ ಉದ್ಘಾಟಿಸಿದರು.
ನಾವೆಲ್ಲರೂ ಸರ್ವಧರ್ಮಿಯರ ಒಡಗೂಡಿವಿಕೆಯಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಈ ಮೂಲಕ ಸಾಮಾಜಿಕ ಸಾಮರಸ್ಯ ಹೊಂದಿರಬೇಕು ಎಂದು ವಿವರಿಸಿದರು. ಸ್ಥಳದಾನಿ ಡಾ|ಛಿ ಶಿವಪ್ರಸಾದ್ ರೈ ಕಾರ್ಯಕ್ರಮದ ಅಧ್ಯಕ್ಷ ವಹಿಸಿ ಶುಭ ಹಾರೈಸಿದರು. ಸಮಿತಿ ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ, ಪ್ರಮುಖರಾದ ಬೇಬಿ ಕುಂದರ್, ರಘುನಾಥ ಪಯ್ಯಡೆ, ಪ್ರವೀಣ್ ಕಿಣಿ, ಜನಾರ್ದನ ಚಂಡ್ತಿಮಾರ್, ಪ್ರಶಾಂತ್ ಕುಲಾಲ್, ಚಂದ್ರಶೇಖರ್ ಸಹಿತ ಇತರರು ಉಪಸ್ಥಿತರಿದ್ದರು.