ಬಂಟ್ವಾಳ

ವೈಯಕ್ತಿಕ ವಿಕಸನದ ಕಡೆಗೆ ಚಿತ್ತ ಹರಿಸಿ: ಗುರುದತ್ತ್ ಬಂಟ್ವಾಳ್‌ಕಾರ್

ಜಗತ್ತು ಬದಲಾಗುತ್ತಿದೆ. ಅದರಂತೆ ವ್ಯವಸ್ಥೆಯೂ ಬದಲಾಗುತ್ತದೆ. ಇಂದು ಶಿಕ್ಷಣವು ಕೇವಲ ಪಠ್ಯಕೇಂದ್ರಿತವಾಗಿದ್ದರೆ ಸಾಲದು. ವೈಯಕ್ತಿಕ ವಿಕಸನಕ್ಕೆ ಪೂರಕವಾದ ಇತರ ಚಟುವಟಿಕೆಗಳ ಕಡೆಗೂ ಗಮನ ಹರಿಸಬೇಕು. ಅದು ಬದುಕನ್ನು ಎದುರಿಸುವ ನಿಜವಾದ ಶಿಕ್ಷಣ ಎಂದು ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದ ಸಹಾಯಕ ನಿರ್ದೇಶಕ ಗುರುದತ್ ಬಂಟ್ವಾಳ್‌ಕಾರ್ ಹೇಳಿದರು.
ಬಂಟ್ವಾಳದ ಎಸ್.ವಿ.ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಫರ್ಧೆ ರಿಥಮ್ ಎಸ್.ವಿ.ಎಸ್. ಉದ್ಘಾಟಿಸಿ ಮಾತನಾಡಿದರು. ಯಾವುದೇ ಸ್ಫರ್ಧೆಗಳಿರಲಿ ಅದರಲ್ಲಿ ಕ್ರೀಯಾಶೀಲವಾಗಿ ಭಾಗವಹಿಸಬೇಕು. ಅದು ನಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ ಎಂದವರು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಮಾತನಾಡಿ ಕಾಲೇಜು ಮತ್ತು ವಿದ್ಯಾರ್ಥಿಗಳ ಬೆಳವಣಿಗೆ ದೃಷ್ಟಿಯಿಂದ ಇಂಥ ಸ್ಪರ್ಧೆಗಳು ಸಹಕಾರಿ. ಸೋಲು-ಗೆಲುವನ್ನು ಪರಿಭಾವಿಸದೆ ಸಕಾರಾತ್ಮಕ ದೃಷ್ಟಿಕೋನದಿಂದ ಎಲ್ಲರೂ ಭಾಗವಹಿಸಬೇಕು ಎಂದರು. ಎಸ್.ವಿ.ಎಸ್ ಕಾಲೇಜಿನ ಸಂಚಾಲಕರಾದ ಕೂಡಿಗೆ ಪ್ರಕಾಶ್ ಶೆಣ್ಯೆ ಅಧ್ಯಕ್ಷತೆ ವಹಿಸಿದ್ದರು.
ರಿಥಮ್ ಎಸ್.ವಿ.ಎಸ್. ಸಂಯೋಜಕಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಪ್ರೇಮಲತಾ ಪೈ ಸ್ವಾಗತಿಸಿದರು. ಕಾಲೇಜಿನ ಐಕ್ಯುಎಸಿ ಸಂಯೋಜಕ ಮತ್ತು ರಿಥಮ್ ಎಸ್. ವಿ.ಎಸ್. ಸಹಸಂಯೋಜಕ ಡಾ. ಟಿ.ಕೆ.ರವೀಂದ್ರನ್ ವಂದಿಸಿದರು. ಉಪನ್ಯಾಸಕಿ ವಿನಂತಿ ಗೋಪಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ