ಭಾನುವಾರ ಸಜೀಪಮುನ್ನೂರು ಗ್ರಾಮದ ಮಂಜಲ್ಪಾದೆ ಎಂಬಲ್ಲಿರವ ಅಂಬಡೆಬೈಲ್ ನದೀ ತೀರದಲ್ಲಿರುವ ಆಳವಾದ ಕೆರೆಯಲ್ಲಿ ಈಜಾಡಲು ಬಂದ ದೇರಳಕಟ್ಟೆ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಸೋಮವಾರ ದೊರೆತಿದೆ.
ಕೇರಳ ಮೂಲದ ನಿವಾಸಿ ದಂತ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿರುವ ಡೆನ್ನಿಸ್ ಮೃತಪಟ್ಟಾತ. ಗೂಡಿನಬಳಿಯ ಮುಳುಗುತಜ್ಞರು ಶವವನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು.
ಐವರು ವಿದ್ಯಾರ್ಥಿಗಳು ರಜೆಯ ಮಜಾ ಸವಿಯಲು ಇಲ್ಲಿಗೆ ಆಗಮಿಸಿದ್ದು, ನದಿ ತೀರದಲ್ಲಿರುವ ಆಳವಾದ ಕೆರೆಯಲ್ಲಿ ಈಜಾಡಲು ತೆರಳಿದ್ದರು. ಈ ಸಂದರ್ಭ ಡೆನ್ನಿಸ್ ನೀರಲ್ಲಿ ಮುಳುಗಿದ್ದರು. ಸುದ್ದಿ ತಿಳಿದು ಭಾನುವಾರ ರಾತ್ರಿಯೇ ಆಗಮಿಸಿದ ಅಗ್ನಿಶಾಮಕದಳ ಕಾರ್ಯಾಚರಣೆ ನಡೆಸಿ ಮರಳಿದ್ದರು. ಬಳಿಕ ಗೂಡಿನಬಳಿಯ ಈಜುತಜ್ಞರ ನೆರವಿನಿಂದ ಕೆಸರಲ್ಲಿ ಹೂತ ಮೃತದೇಹ ಹೊರಕ್ಕೆ ತರಲಾಯಿತು ಎಂದು ಬಂಟ್ವಾಳ ಪೊಲೀಸರು ತಿಳಿಸಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಈಜಲು ಕೆರೆಗಿಳಿದ ವೈದ್ಯಕೀಯ ವಿದ್ಯಾರ್ಥಿ ಸಾವು"
Be the first to comment on "ಈಜಲು ಕೆರೆಗಿಳಿದ ವೈದ್ಯಕೀಯ ವಿದ್ಯಾರ್ಥಿ ಸಾವು"