ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬವು ಸೆಪ್ಟೆಂಬರ್ 1ರಂದು ನಡೆಯುವ ಪ್ರಯುಕ್ತ ಜಿಲ್ಲೆಯಲ್ಲಿ ಅಂದು ಸಾವ೯ತ್ರಿಕ ರಜೆ ಘೋಷಿಸಲಾಗಿದೆ ಎಂದು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.
ಸೆ.2ರಂದು ನಿಗದಿಯಾಗಿದ್ದ ಬಕ್ರೀದ್ ರಜೆಯನ್ನು ಬದಲಾಯಿಸಿ, ದ.ಕ. ಜಿಲ್ಲೆಯಲ್ಲಿ ಸೆಪ್ಟೆಂಬರ್ 1ರಂದು ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ ರಜೆ ನೀಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಸೆಪ್ಟೆಂಬರ್ 2ರಂದು ಎಂದಿನಂತೆ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳು ಕಾಯ೯ನಿವ೯ಹಿಸಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)