ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯ

ಕ್ರೀಡೆಯು ವಿದ್ಯಾರ್ಥಿಯ ದೈಹಿಕ ಮತ್ತು ಮಾನಸಿಕ ಸುದೃಢತೆಗೆ ಸಹಕಾರಿ ಎಂದು ಎಸ್.ವಿ.ಎಸ್ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಹೇಳಿದರು.

ಜಾಹೀರಾತು

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ಬಂಟ್ವಾಳ ತಾಲೂಕುಮಟ್ಟದ ಪ.ಪೂ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಟೇಬಲ್ ಟೆನ್ನಿಸ್ ಪಂದ್ಯಾಟದ ಬಹುಮಾನ ವಿತರಣಾ ಕಾರ್‍ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿ ಸ್ಪರ್ಧೆಯಲ್ಲಿ ಕ್ರಿಯಾಶೀಲವಾಗಿ ಭಾಗವಹಿಸಿ ಸೋಲು-ಗೆಲುವುವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತ ವಿದ್ಯಾರ್ಥಿ ಮಾನಸಿಕವಾಗಿ ಕುಗ್ಗದೆ ಸಕಾರಾತ್ಮಕ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ಆದಂತಹ ಸಣ್ಣ ಸಣ್ಣ ತಪ್ಪುಗಳನ್ನು ತಿಳಿದು ಮುಂದಿನ ಸ್ಪರ್ಧೆಯಲ್ಲಿ ಗೆಲುವಿಗೆ ದಾರಿಮಾಡುವುದರ ಜತೆ  ಒಳ್ಳೆಯ ರಾಷ್ಟ್ರಮಟ್ಟದ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.

ವಿದ್ಯಾರ್ಥಿ ಕ್ಷೇಮಾಪಾಲನಾಕಾರಿ ಬಾಲಕೃಷ್ಣ ಗೌಡ, ಎಸ್.ವಿ.ಎಸ್ ಪದವಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಫೌಜಿಯಾ ಬಿ. ಎ. ಉಪಸ್ಥಿತರಿದ್ದರು.

ಎಸ್.ವಿ.ಎಸ್ ಪ.ಪೂ. ಕಾಲೇಜಿನ ಹುಡುಗಿಯರ ಟೇಬಲ್ ಟೆನ್ನಿಸ್ ತಂಡವು ವಿನ್ನರ್‍ಸ್ ಆಗಿ ಜಿಲ್ಲಾ ಮಟ್ಟ ಸ್ಪರ್ಧೆಗೆ ಆಯ್ಕೆ ಪಡೆದುಕೊಂಡಿತು. ಹುಡುಗರ ಟೇಬಲ್ ಟೆನ್ನಿಸ್ ತಂಡವು ರನ್ನರ್‍ಸ್ ಆಗಿ ದ್ವಿತೀಯಾ ಸ್ಥಾನವನ್ನು ಪಡೆದುಕೊಂಡಿತು.

ಕಾರ್‍ಯಕ್ರಮದಲ್ಲಿ ತಾರಾನಾಥ ಜಿ. ಎಸ್ ಮತ್ತು ರೂಪ ಉಪಸ್ಥಿತರಿದ್ದರು. ಎಸ್.ವಿ.ಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಲೆಪ್ಟಿನೆಂಟ್ ಸುಂದರ್ ಸ್ವಾಗತಿಸಿ, ಕಾರ್‍ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಕ್ರೀಡಾ ಸಲಹೆಗಾರ ಪ್ರದೀಪ್ ಪೂಜಾರಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts