ಸಜೀಪಮೂಡದ ಸುಭಾಷ್ ನಗರದ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನಮಂದಿರದಲ್ಲಿ ಬುಧವಾರ ಸೆ.೬ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲಾಗುವುದು.
ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಅರಣ್ಯ ಸಚಿವ ಬಿ.ರಮಾನಾಥ ರೈ ಬೆಳಗ್ಗೆ ೧೦.೩೦ಕ್ಕೆ ಉದ್ಘಾಟಿಸುವರು.
ಆಹಾರ ಸಚಿವ ಯು.ಟಿ.ಖಾದರ್ ಅಧ್ಯಕ್ಷತೆ ವಹಿಸುವರು. ಸಂಸದ ನಳಿನ್ ಕುಮಾರ್ ಕಟೀಲ್,. ಶಾಸಕಿ ಶಕುಂತಳಾ ಶೆಟ್ಟಿ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಬಂಟ್ವಾಳ ಪುರಸಭೆ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸಜೀಪಮೂಡ ಗ್ರಾಪಂ ಅಧ್ಯಕ್ಷ ಗಣಪತಿ ಭಟ್ ಮುಖ್ಯ ಅತಿಥಿಗಳಾಗಿರುವರು.
ಈ ಸಂದರ್ಭ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್, ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ, ತಾಲೂಕು ಯುವವಾಹಿನಿ ಅಧ್ಯಕ್ಷ ಲೋಕೇಶ ಸುವರ್ಣ ಗೌರವ ಉಪಸ್ಥಿತಿ ಇರಲಿದೆ.
ಕಾಸರಗೋಡು ಬ್ರಹ್ಮಶ್ರೀ ನಾರಾಯಣಗುರು ಯುವ ವೇದಿಕೆ ಅಧ್ಯಕ್ಷ ಕೃಷ್ಣಶಿವಕೃಪ ಕುಂಜತ್ತೂರು ಪ್ರಧಾನ ಭಾಷಣ ಮಾಡಲಿರುವರು ಎಂದು ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾಸಂಘ, ಬ್ರಹ್ಮಶ್ರೀ ನಾರಾಯಣಗುರು ಜ್ಞಾನಮಂದಿರ ಸುಭಾಷ್ ನಗರ, ತಾಲೂಕು ಯುವವಾಹಿನಿ ಘಟಕ ಮತ್ತು ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಾಜ ಸೇವಾ ಸಂಘ ಸಹಕಾರ ನೀಡಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.