ನಂಬಿಕೆಗಳ ಹುಸಿಗೊಳಿಸದೆ ಕರ್ತವ್ಯ ನಿರ್ವಹಿಸಿ: ಶಿಕ್ಷಕರಿಗೆ ರಮಾನಾಥ ರೈ ಸಲಹೆ

ಶಿಕ್ಷಕರನ್ನು ಮಕ್ಕಳು ನಂಬುತ್ತಾರೆ. ಅದನ್ನು ಹುಸಿಗೊಳಿಸದೆ, ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಮಟ್ಟದ ಗುರುವಂದನಾ ದಿನಾಚರಣೆ ಸಮಿತಿ ಆಶ್ರಯದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಮಂಗಳವಾರ ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರುವಂದನಾ ಸಮಾರಂಭವನ್ನು ಉದ್ಘಾಟಿಸಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಶಿಲ್ಪಿ ಕಲ್ಲನ್ನು ಕೆತ್ತುವಲ್ಲಿ ಮೈಗೂಡಿಸಿಕೊಂಡ ಶಿಸ್ತು, ಸಂಯಮ, ತಾಳ್ಮೆ, ನಯನಾಜೂಕುತನವನ್ನು ಶಿಕ್ಷಕರೂ ಮೈಗೂಡಿಸಿಕೊಳ್ಳಬೇಕು ಅವರು ಸಲಹೆ ನೀಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಬಂಟ್ವಾಳ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಜಿಲ್ಲಾಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ತಾಪಂ ಸ್ಥಾಯಿ ಸಮಿತಿ ಸದಸ್ಯೆ ಸದಸ್ಯೆ ಬೇಬಿ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ನಾರಾಯಣ ಹೆಗ್ಡೆ, ಡಯಟ್ ಉಪನ್ಯಾಸಕಿ ಚಂದ್ರಾವತಿ, ತಹಶೀಲ್ದಾರ್ ಪುರಂದರಹೆಗ್ಡೆ, ಕ್ಷೇತ್ರ ಸಮನ್ವಯಾಧಿಕಾರಿ ರಾಜೇಶ್, ಶಿಕ್ಷಣ ಸಂಘಟನೆಗಳ ಪ್ರಮುಖರಾದ ರಮೇಶ್ ನಾಯಕ್ ರಾಯಿ, ಶಿವಪ್ರಸಾದ್ ಶೆಟ್ಟಿ, ಜೋಯಲ್ ಲೋಬೋ, ಉಮಾನಾಥ ರೈ, ವೈ ರಘು, ಚನ್ನಕೇಶವ, ಲ್ಯಾನ್ಸಿ ಡಿ’ಸೋಜ, ಬಿ.ರಾಮಚಂದ್ರ ರಾವ್, ಜಗದೀಶ್ ಬಾಳ್ತಿಲ, ನವೀನ್, ಜಯರಾಮ್, ಶ್ರೀಕಾಂತ್ ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ಪ್ರೊ.ವೃಷಭರಾಜ್ ಜೈನ್ ಪ್ರಧಾನ ಉಪನ್ಯಾಸ ನೀಡಿದರು. ಈ ಸಂದರ್ಭ ಶಿಕ್ಷಕರಿಂದ ವಿವಿಧ ವಿನೋದಾವಳಿಗಳು ನಡೆದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂಬಿಕೆಗಳ ಹುಸಿಗೊಳಿಸದೆ ಕರ್ತವ್ಯ ನಿರ್ವಹಿಸಿ: ಶಿಕ್ಷಕರಿಗೆ ರಮಾನಾಥ ರೈ ಸಲಹೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*