ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಮಟ್ಟದ ಗುರುವಂದನಾ ದಿನಾಚರಣೆ ಸಮಿತಿ ಆಶ್ರಯದಲ್ಲಿ ರೋಟರಿ ಕ್ಲಬ್ ಬಂಟ್ವಾಳ ಸಹಯೋಗದೊಂದಿಗೆ ಮಂಗಳವಾರ ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರುವಂದನಾ ಸಮಾರಂಭವನ್ನು ಉದ್ಘಾಟಿಸಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ಶಿಲ್ಪಿ ಕಲ್ಲನ್ನು ಕೆತ್ತುವಲ್ಲಿ ಮೈಗೂಡಿಸಿಕೊಂಡ ಶಿಸ್ತು, ಸಂಯಮ, ತಾಳ್ಮೆ, ನಯನಾಜೂಕುತನವನ್ನು ಶಿಕ್ಷಕರೂ ಮೈಗೂಡಿಸಿಕೊಳ್ಳಬೇಕು ಅವರು ಸಲಹೆ ನೀಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಪಂ ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಬಂಟ್ವಾಳ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಜಿಲ್ಲಾಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ತಾಪಂ ಸ್ಥಾಯಿ ಸಮಿತಿ ಸದಸ್ಯೆ ಸದಸ್ಯೆ ಬೇಬಿ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ನಾರಾಯಣ ಹೆಗ್ಡೆ, ಡಯಟ್ ಉಪನ್ಯಾಸಕಿ ಚಂದ್ರಾವತಿ, ತಹಶೀಲ್ದಾರ್ ಪುರಂದರಹೆಗ್ಡೆ, ಕ್ಷೇತ್ರ ಸಮನ್ವಯಾಧಿಕಾರಿ ರಾಜೇಶ್, ಶಿಕ್ಷಣ ಸಂಘಟನೆಗಳ ಪ್ರಮುಖರಾದ ರಮೇಶ್ ನಾಯಕ್ ರಾಯಿ, ಶಿವಪ್ರಸಾದ್ ಶೆಟ್ಟಿ, ಜೋಯಲ್ ಲೋಬೋ, ಉಮಾನಾಥ ರೈ, ವೈ ರಘು, ಚನ್ನಕೇಶವ, ಲ್ಯಾನ್ಸಿ ಡಿ’ಸೋಜ, ಬಿ.ರಾಮಚಂದ್ರ ರಾವ್, ಜಗದೀಶ್ ಬಾಳ್ತಿಲ, ನವೀನ್, ಜಯರಾಮ್, ಶ್ರೀಕಾಂತ್ ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ಪ್ರೊ.ವೃಷಭರಾಜ್ ಜೈನ್ ಪ್ರಧಾನ ಉಪನ್ಯಾಸ ನೀಡಿದರು. ಈ ಸಂದರ್ಭ ಶಿಕ್ಷಕರಿಂದ ವಿವಿಧ ವಿನೋದಾವಳಿಗಳು ನಡೆದವು.