ಬಂಟ್ವಾಳ

ನಾರಾಯಣಗುರು ತತ್ವಾದರ್ಶ ಪಾಲನೆಗೆ ಸಚಿವ ರಮಾನಾಥ ರೈ ಕರೆ

ಮತೀಯ ಸಾಮಾರಸ್ಯ ಕದಡುವ ನಿಟ್ಟಿನಲ್ಲಿ  ಹತ್ಯೆಯಂತಹ ಹೇಯ ಕೃತ್ಯ ಜಿಲ್ಲೆಯಲ್ಲಿ ನಡೆದಿದೆ, ಇದಕ್ಕೆ  ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಾಯ ಮಾಡಿದವರು, ಅಪಪ್ರಚಾರ ಮಾಡುವವರು ಸರ್ವ ನಾಶ ಆಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸಜೀಪಮೂಡದ ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನ ಮಂದಿರದಲ್ಲಿ  ಆಚರಿಸಲಾಯಿತು. ಈ ಸಂದರ್ಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಇ.ರಮಾನಾಥ ರೈ, ಸನಾತನ ಹಿಂದೂ ಧರ್ಮದಲ್ಲಿ ಸಾಮಾಜಿಕ ಅಸಮಾನತೆ ಇದ್ದ ಕಾಲದಲ್ಲಿ ಸಾಮಾಜಿಕ ನ್ಯಾಯ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಕ್ರಾಂತಿಯ ಬೀಜ ಬಿತ್ತಿ ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಿದ್ದಾರೆ. ಇದನ್ನು ಮತ್ತೆ ಸಮಾಜಕ್ಕೆ  ತಿಳಿಸುವ ಕಾರ್ಯ ಆಗಬೇಕಿದ್ದು ನಾರಾಯಣ ಗುರುಗಳ ಸಂದೇಶ ಇಂದಿಗೂ ಪ್ರಸ್ತುತ ಎಂದರು.

ಕಾಸರಗೋಡು ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷ ಕೃಷ್ಣ ಶಿವಕೃಪ ಕುಂಜತ್ತೂರು ಪ್ರಧಾನ ಭಾಷಣ ಮಾಡಿ ಗುರುಗಳು ಕೇವಲ ಒಂದು ಸಮುದಾಯಕ್ಕೆ  ಸೀಮಿತರಾದವರಲ್ಲ. ಬದಲಾಗಿ ಇಡೀ ಮಾನವ ಸಮುದಾಯಕ್ಕೆ ಮಾರ್ಗದರ್ಶನ ಮಾಡಿದವರು ಎಂದರು.

ಜಾಹೀರಾತು

ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರಾ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ತಾ.ಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ ಬಂಗೇರ, ಸದಸ್ಯೆ ಮಲ್ಲಿಕಾ ಶೆಟ್ಟಿ,  ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಸಜೀಪಮೂಡ ಗ್ರಾ.ಪ. ಅಧ್ಯಕ್ಷ ಗಣಪತಿ ಭಟ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್, ಸಜೀಪಮೂಡಬ್ರಹ್ಮಶ್ರೀ ನಾರಯಣ ಗುರು ಸೇವಾ ಸಮಿತಿ  ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಯಶವಂತ ದೇರಾಜೆ, ಯುವ ವಾಹಿನಿ ಅಧ್ಯಕ್ಷ ಲೋಕೇಶ ಸುವರ್ಣ, ಕೆಡಿಪಿ ಸದಸ್ಯೆ ಜಯಂತಿ, ಇರಾ ಗ್ರಾ.ಪಂ ಅಧ್ಯಕ್ಷ ಅಬ್ದುಲ್  ರಝಾಕ್, ಗೇರು ಅಭಿವೃದ್ದಿ ನಿಗಮದ ಸದಸ್ಯ ಜಗದೀಶ್ ಕೊಲ, ಮಹಿಳಾ ಸಮಿತಿ ಅಧ್ಯಕ್ಷೆ ಶಾರದ, ಉಪಸ್ಥಿತರಿದ್ದರು.ತಹಶಿಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ, ಪ್ರಸ್ತಾವಿಸಿದರು, ಕಂದಾಯ ನಿರೀಕ್ಷಕ ರಾಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ