ಮಕ್ಕಳ ಪ್ರತಿಭಾ ಶೋಧನೆಗೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆ ಒದಗಿಸುತ್ತದೆ. ಗ್ರಾಮೀಣ ಪ್ರತಿಭೆಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಲು ಇಲಾಖೆ ಕಾರ್ಯಕ್ರಮಗಳು ವೇದಿಕೆ ಒದಗಿಸುತ್ತವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ ಲೊರೆಟ್ಟೋ ವಿದ್ಯಾಸಂಸ್ಥೆ ಯ ಆಶ್ರಯದಲ್ಲಿ ಲೊರೆಟ್ಟೋದಲ್ಲಿ ಬುಧವಾರ ಆರಂಭಗೊಂಡ ಎರಡು ದಿನಗಳ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೧೭ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ ಮಕ್ಕಳು ಪಠ್ಯ ಹಾಗೂ ಸಹಪಠ್ಯದ ಚಟುವಟಿಕೆಗಳಲ್ಲಿ ಸ್ಪರ್ಧಾತ್ಮಕ ಮನೋಭಾವದಲ್ಲಿ ತೊಡಗಿಸಿಕೊಂಡಾಗ ಹೆಚ್ಚು ಕ್ರಿಯಾಶೀಲರಾಗಲು ಸಾಧ್ಯ ಎಂದರು.
ಲೊರೆಟ್ಟೋ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ.ಫಾ. ಇಲಿಯಾಸ್ ಡಿಸೋಜ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಜಿಲ್ಲಾಪಂಚಾಯತ್ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಮಮತಾ ಗಟ್ಟಿ, ಮಂಜುಳಾ ಮಾಧವ ಮಾವೆ, ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ತಾ.ಪಂ.ಕಾರ್ಯನಿರ್ವಹಣಾಕಾರಿ ಸಿಪ್ರಿಯನ್ ಮಿರಾಂದ, ಶಿಕ್ಷಣ ಸಂಘಟನೆಗಳ ಪ್ರಮುಖರಾದ ರಮೇಶ್ ನಾಯಕ್ ರಾಯಿ, ಶಿವಪ್ರಸಾದ್ ಶೆಟ್ಟಿ, ಜೋಯಲ್ ಲೋಬೋ, ಉಮಾನಾಥ ರೈ, ವೈ ರಘು, ಚನ್ನಕೇಶವ, ಲ್ಯಾನ್ಸಿ ಡಿ’ಸೋಜ, ಬಿ.ರಾಮಚಂದ್ರ ರಾವ್, ತಾರೇಶ್, ನವೀನ್, ಜಯರಾಮ್ , ಶಾಲಾ ಮುಖ್ಯೋಪಾಧ್ಯಾಯಿನಿ ಶಾಂತಿ ಲೋಬೋ, ಪ್ರಮುಖರಾದ ರಿಚರ್ಡ್, ಐರಿನ್ ಡಿಸೋಜ, ಚಾರ್ಲ್ಸ್ ಮಾಲ್ಟೀಸ್, ವಿನ್ನಿಫ್ರೆಡ್ ಕಾರ್ಲೋ, ಕ್ಷೇತ್ರ ಶಿಕ್ಷಣಾಕಾರಿ ಎನ್.ಶಿವಪ್ರಕಾಶ್ ಉಪಸ್ಥಿತರಿದ್ದರು. ಕ್ಷೇತ್ರ ಸಮನ್ವಯಾಕಾರಿ ರಾಜೇಶ್ ಸ್ವಾಗತಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು. ಸುಜಾತಾ ವಂದಿಸಿದರು.