ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆ ಮತ್ತು ಪತ್ರಿಕಾ ವರದಿಗಾರ ಇಮ್ತಿಯಾಝ್ ಬಂಧನ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ ರೋಡಿನ ಮೇಲ್ಸೇತುವೆ ಬಳಿ ಪ್ರತಿಭಟನೆ ನಡೆಯಿತು.
ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಲಂಕೇಶ್ ಹತ್ಯೆಯ ದುಷ್ಕರ್ಮಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕ್ಯಾಂಪಸ್ ಫ್ರಂಟ್ ರಾಜ್ಯ ಕಾರ್ಯದರ್ಶಿಗಳಾದ ಫಯಾಝ್ ದೊಡ್ಡಮನೆ ಮಾತನಾಡಿ ಪತ್ರಕರ್ತರ ಮೇಲಿನ ದೌರ್ಜನ್ಯ ಹಾಗೂ ಬಂಧನ ಪತ್ರಿಕಾ ಸ್ವಾತಂತ್ರ್ಯದ ದಮನ ಎಂದು ಹೇಳಿದರು.
ಬಂಟ್ವಾಳ ತಾಲೂಕು ಅಧ್ಯಕ್ಷರಾದ ನಬೀಲ್ ರಹ್ಮಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಪಿ.ಜೆ ಹಾಗು ಇತರರು ಉಪಸ್ಥಿತರಿದ್ದರು. ಅಥಾವುಲ್ಲ ನಾಸೀರ್ ಕಾರ್ಯಕ್ರಮ ನಿರೂಪಿಸಿದರು ಶಿಹಾಬ್ ಸ್ವಾಗತಿಸಿ ವಂದಿಸಿದರು.
Be the first to comment on "ಪತ್ರಕರ್ತರ ಮೇಲೆ ದೌರ್ಜನ್ಯ ಖಂಡಿಸಿ ಸಿಎಫ್‌ಐ ಪ್ರತಿಭಟನೆ"