ಕಲ್ಲಡ್ಕ

ಕಡೇಶ್ವಾಲ್ಯ ದೇವಸ್ಥಾನದಲ್ಲಿ ಕಳವು

ಬಂಟ್ವಾಳ ತಾಲೂಕಿನ ಕಡೇಶಿವಾಲಯ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಭಾನುವಾರ ತಡರಾತ್ರಿ  ಸುಮಾರು 5,13,000 ರೂ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ  ಎಂದು ಎಸ್.ಐ. ಉಮೇಶ್ ಬಂಟ್ವಾಳನ್ಯೂಸ್ ಗೆ ತಿಳಿಸಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ ಪ್ರಮುಖ ಕಾರಣಿಕದ ದೇವಸ್ಥಾನ ಇದಾಗಿದ್ದು, ಇಲ್ಲಿ ಸಿಸಿ ಟಿವಿ ಕ್ಯಾಮರಾವನ್ನೂ ಅಳವಡಿಸಲಾಗಿತ್ತು. ಆದರೆ ಕಳ್ಳರು ಕ್ಯಾಮರಾದಲ್ಲಿ ತಮ್ಮ ಗುರುತುಗಳು ಹೊರಜಗತ್ತಿಗೆ ಬಾರದಂತೆ ಅದರಲ್ಲಿದ್ದ  ಫೂಟೇಜ್ ಗಳನ್ನು ಹೊತ್ತೊಯ್ದಿದ್ದಾರೆ.

ಗರ್ಭಗುಡಿಯಲ್ಲಿದ್ದ ಲಕ್ಷ್ಮೀನರಸಿಂಹ ದೇವರ ಮೂರ್ತಿ ಚಿನ್ನದ ಪ್ರಭಾವಳಿ, ಹುಂಡಿಯಲ್ಲಿದ್ದ ಹಣವನ್ನು ಹಾಗೂ ದೇವರಿಗೆ ಹಾಕಿದ ಆಭರಣಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

ಹೇಗೆ ನುಗ್ಗಿದರು?

ದೇವಸ್ಥಾನದ ಮುಂಬಾಗಿಲು ಮುರಿದು ಒಳಹೊಕ್ಕ ಕಳ್ಳರು, ಮುಖ್ಯ ದೇವರ ಗರ್ಭಗುಡಿಯ ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಅಲ್ಲಿಂದ ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಯ ಪ್ರಭಾವಳಿಯನ್ನು ಮತ್ತು ಹುಂಡಿಯನ್ನ ತಡಕಾಡಿದ್ದಾರೆ. ಬಳಿಕ ದೇವಸ್ಥಾನದ ಸಿಸಿ ಕ್ಯಾಮರಾವನ್ನು ಹಾಳುಗೆಡವಿ ಅದರ ಫೂಟೇಜ್ ಗಳನ್ನು ಹೊತ್ತೊಯ್ದಿದ್ದಾರೆ.

ದೇವಸ್ಥಾನದ ಅರ್ಚಕರು ಬೆಳಗ್ಗೆ ಪೂಜೆ ಕಾರ್ಯಕ್ಕೆ ತೆರಳಿದ ಸಂದರ್ಭ ಘಟನೆ ಗಮನಕ್ಕೆ ಬಂದಿದೆ. ಬಳಿಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಸ್.ಐ. ಉಮೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಲಾಗಿದ್ದು, ಪರಿಶೀಲನೆ ನಡೆಸಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts