ಬಂಟ್ವಾಳ ತಾಲೂಕಿನಲ್ಲಿ ಅತಿ ಹೆಚ್ಚು ಅಂಗನವಾಡಿ ಕೇಂದ್ರಗಳಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ನರಿಕೊಂಬು ಗ್ರಾಮದ ನಿನ್ನಿಪಡ್ಪು ಅಂಗನವಾಡಿ ಕೇಂದ್ರದ ಉದ್ಘಾಟನೆ ಮತ್ತು ನಾನಾ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಶಿಲಾನ್ಯಾಸ ಗ್ರಾಪಂ ಅಧ್ಯಕ್ಷ ಯಶೋಧರ ಕರ್ಬೆಟ್ಟು ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿಂದೆ ಕೆಲವೊಂದು ತಾಲೂಕಿನಲ್ಲಿ ಒಂದು ಅಂಗನವಾಡಿ ಕೇಂದ್ರವೂ ಇರಲಿಲ್ಲ. ಈಗ ಬಂಟ್ವಾಳ ತಾಲೂಕು ರಾಜ್ಯದಲ್ಲಿ ಅತಿ ಹೆಚ್ಚು ಅಂಗನವಾಡಿ ಕೇಂದ್ರಗಳನ್ನು ಹೊಂದಿದೆ. ಅಪೌಷ್ಟಿಕತೆಯ ಸಮಸ್ಯೆಯೂ ದೂರವಾಗಿದ್ದು, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಟಿಕ ಆಹಾರ ಒದಗಿಸುವ ಮಾತೃಪೂರ್ಣ ಯೋಜನೆ ಅಕ್ಟೋಬರ್ ೨ರಿಂದ ಜಿಲ್ಲೆಯಲ್ಲಿ ಜಾರಿಗೊಳ್ಳಲಿದೆ ಎಂದರು.
ಈ ಸಂದರ್ಭ ಮಾತನಾಡಿದ ವಿಧಾನಪರಿಷತ್ತು ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉದ್ಯೋಗ ಖಾತರಿಯಡಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉದ್ಯೋಗ ಖಾತ್ರಿ ಯೋಜನೆಯಡಿ ಹೊಸಲಚ್ಚಿಲು ಎಂಬಲ್ಲಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟು ಮತ್ತು ಹೊಸ ಒಕ್ಕಲು ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ ಅವರು ನರಿಕೊಂಬು ಗ್ರಾಮದ ನೆಹರೂನಗರದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು.
ವೀರಕಂಭ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಪಿ, ಶಿಶು ಅಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಪುಷ್ಪಲತಾ, ಸ್ಥಳದಾನಿ ಮಾರಪ್ಪ ಪೂಜಾರಿ ದೋಟ, ಬಾಲವಿಕಾಸ ಸಮಿತಿ ಅಧ್ಯಕ್ಷ ಕಿಶೋರ್ ಶೆಟ್ಟಿ, ಕಟ್ಟಡ ಸಾಮಗ್ರಿ ಸರಬರಾಜುದಾರ ನಾಗೇಶ್ ಅವರನ್ನು ಸನ್ಮಾನಿಸಲಾಯಿತು.
ನರಿಕೊಂಬು ಗ್ರಾಮ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ.ಕ. ಮತ್ತು ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಾಪಂ ಸದಸ್ಯೆ ಗಾಯತ್ರಿ ರವೀಂದ್ರ ಸಫಲ್ಯ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಉಪಾಧ್ಯಕ್ಷ ರಾಜೀವಿ, ಸಿಡಿಪಿಒ ಮಲ್ಲಿಕಾ, ಮೇಲ್ವಿಚಾರಕಿ ಉಷಾ ಎಂ, ಇಂಜಿನಿಯರ್ ನರೇಂದ್ರಬಾಬು, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಸಹಾಯಕ ನಿರ್ದೇಶಕಿ ದಯಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಾನಂದ ಪೂಜಾರಿ, ಗ್ರಾಪಂ ಸದಸ್ಯರಾದ ರವೀಂದ್ರ ಸಪಲ್ಯ, ದಿವಾಕರ ಶಂಭೂರು, ವಿಶ್ವನಾಥ ಪೂಜಾರಿ ಕೊಡಂಗೆಕೋಡಿ, ಸುಲೇಮಾನ್ ನೆಹರೂನಗರ, ರಂಜಿತ್ ಕೆದ್ದೇಲು, ಉದಯ ಶಾಂತಿಲ, ಜಯರಾಜ್, ಹೇಮಲತಾ, ಜುಬೈದಾ, ನವೀನ್ ಪುತ್ರೋಟಿಬೈಲು, ಮಾಧವ ಕರ್ಬೆಟ್ಟು, ಮೆಸ್ಕಾಂನ ಬಂಟ್ವಾಳ ಶಾಖೆಯ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ಕೆಡಿಪಿ ಸದಸ್ಯ ಉಮೇಶ್ ಬೋಳಂತೂರು, ಗ್ರಾಪಂ ಮಾಜಿ ಅಧ್ಯಕ್ಷ ಆನಂದ ಸಾಲಿಯಾನ್, ತಾಪಂ ಮಾಜಿ ಉಪಾಧ್ಯಕ್ಷ ಆನಂದ ಎ.ಶಂಭೂರು ಉಪಸ್ಥಿತರಿದ್ದರು. ಬಾಲವಿಕಾಸ ಸಮಿತಿ ಅಧ್ಯಕ್ಷ ಕಿಶೋರ್ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಯಶೋಧ ವರದಿ ವಾಚಿಸಿದರು. ಗ್ರಾಪಂ ಸದಸ್ಯ ದಿವಾಕರ ಶಂಭೂರು ವಂದಿಸಿದರು. ವಸಂತ ಭೀಮಗದ್ದೆ ಕಾರ್ಯಕ್ರಮ ನಿರೂಪಿಸಿದರು.