ಬಂಟ್ವಾಳ

17ರಂದು ಬಿ.ಸಿ.ರೋಡಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ, ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ 163ನೇ ಜನ್ಮದಿನಾಚರಣೆ ಭಾನುವಾರ ೧೭ರಂದು ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ತಿಳಿಸಿದ್ದಾರೆ.
ಗಾಣದಪಡ್ಪುವಿನಲ್ಲಿರುವ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ವಹಿಸುವರು. ಮುಖ್ಯ ಅತಿಥಿಗಳಾಗಿ ತರಬೇತುದಾರ, ಪ್ರಾಧ್ಯಾಪಕ ರಾಜೇಶ್ ಬೆಜ್ಜಂಗಳ ಭಾಗವಹಿಸುವರು. ರಾಷ್ಟ್ರೀಯ ಬಿಲ್ಲವ ಮಹಾಮಂಡಲ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 8ರಿಂದ ಭಜನೆ, 10ರಿಂದ ಗುರುಪೂಜೆ, ೧೦.೩೦ಕ್ಕೆ ಮಹಾಪೂಜೆ, 11ರಿಂದ ಸಭಾ ಕಾರ್ಯಕ್ರಮ ನಡೆಯುವುದು.
ಸಾಧಕರಿಗೆ ಸನ್ಮಾನ:
ಇದೇ ಸಂದರ್ಭ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಯಕ್ಷಕೌಮುದಿ ಪ್ರಶಸ್ತಿ ಪುರಸ್ಕೃತ ಭಾಗವತ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸದಸ್ಯರಾಗಿ ನೇಮಕಗೊಂಡ ಪತ್ರಕರ್ತ ಎ.ಗೋಪಾಲ ಅಂಚನ್ ಆಲದಪದವು ಅವರನ್ನು ಸನ್ಮಾನಿಸಲಾಗುವುದು. ಮಧ್ಯಾಹ್ನ ೧ರಿಂದ ಅನ್ನಸಂತರ್ಪಣೆ ೨.೩೦ರಿಂದ ಬಿಲ್ಲವ ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ