ಪ್ರತಿಭೆ ಅನಾವರಣಕ್ಕೆ ಸ್ಪರ್ಧೆಗಳು ಸಹಕಾರಿ: ರೊನಾಲ್ಡ್

ಬಹುಮುಖ ಪ್ರತಿಭೆಯ ಅನಾವರಣಕ್ಕೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಸಹಕಾರಿ ಎಂದು ಎಸ್.ವಿ.ಎಸ್ ಪ.ಪೂ. ಕಾಲೇಜು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರೋನಾಲ್ಡ್ ಡಿಸೋಜ ಹೇಳಿದರು.

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ಜಿಲ್ಲಾಮಟ್ಟದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ವಿಕಾಸ್ -೨೦೧೭ರ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆತಾಗ ಸಂಪೂರ್ಣ ಪ್ರತಿಫಲ ಸಿಗುತ್ತದೆ. ಬಹುಮಾನ ಪಡೆಯುವುದೆ ಮುಖ್ಯ ಗುರಿಯಾಗಬಾರದು. ಜೀವನ ಮೌಲ್ಯವನ್ನು ಗಮನದಲ್ಲಿ ಇಟ್ಟುಕೊಂಡು ಬಾಹ್ಯ ಚಿಂತನೆಯನ್ನು ಮಾಡುವಂತಿರಬೇಕು. ಸ್ಪರ್ಧೆಗಳಲ್ಲಿ ಸೋಲನ್ನು ಹಿಮ್ಮೆಟ್ಟಿ ಗೆಲುವನ್ನು ಸಾಧಿಸುವ ಮನೋಪ್ರವೃತ್ತಿ ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಪೂರಕವಾಗುತ್ತದೆ ಎಂದು ಹೇಳಿದರು.

ಎಸ್.ವಿ.ಎಸ್ ಪ.ಪೂ. ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ, ಬಹುಮಾನ ಪಡೆದವರಿಗೆ ಜವಾಬ್ದಾರಿ ಹೆಚ್ಚಾಗಿದ್ದು ಸೋಲು ಆದವರು ತಾನು ಎಂದೂ ಎದೆಗುಂದದೆ ತಪ್ಪನ್ನು ತಿದ್ದಿಕೊಂಡು ಮುಂದೊಂದು ದಿನ ಗೆಲುವು ಸಾಧಿಸುತ್ತೇನೆ ಎಂಬ ಧೃಡವಾದ ಆತ್ಮವಿಶ್ವಾಸ ಹೊಂದಬೇಕು ಎಂದು ಹೇಳಿದರು.

ದ.ಕ ಜಿಲ್ಲೆಯ ೨೪ ವಿವಿಧ ಪ.ಪೂ. ಕಾಲೇಜುಗಳ ವಿದ್ಯಾರ್ಥಿಗಳು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ವಿಕಾಸ್ -೨೦೧೭ರಲ್ಲಿ ಭಾಗವಹಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ತಂಡ ಸಮಗ್ರ ಪಾರಿತೋಷಕ ಪ್ರಶಸ್ತಿ ಪಡೆದುಕೊಂಡಿತು. ಆಶುಭಾಷಣ ಸ್ಪರ್ಧೆ-ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಶೆಣೈ ಪ್ರಥಮ ಮತ್ತು ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪ್ರಜ್ಞಾ ದ್ವಿತೀಯ ಬಹುಮಾನ ಪಡೆದರು. ಕನ್ನಡ ಭಾಷಣ ಸ್ಪರ್ಧೆ-ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಜಿತೀನ್ ಜೀಜೋ  ಪ್ರಥಮ ಮತ್ತು ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿ ಶಾಶಂಕ್ ದ್ವಿತೀಯ ಸ್ಥಾನ ಗಳಿಸಿದರು. ಇಂಗ್ಲಿಷ್ ಭಾಷಣ ಸ್ಪರ್ಧೆ- ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಜ್ಯೋತಿ ಪ್ರಥಮ ಮತ್ತು ಮಂಗಳೂರು ಸೈಂಟ್ ಆಗ್ನೇಸ್ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಮಿಝನಾ ಅಲಿಮಾ ದ್ವಿತೀಯ ಬಹುಮಾನ ಪಡೆದರು. ಜಾನಪದ ಗೀತೆಗಾಯನ ಸ್ಪರ್ಧೆ-ಮಂಗಳೂರು ಸೈಂಟ್ ಅಲೋಶಿಯಸ್ ಪ.ಪೂ ಕಾಲೇಜಿನ ವಿದ್ಯಾರ್ಥಿ ವಿಜೇತ್ ಉಳ್ಳಾಲ್ ಪ್ರಥಮ ಮತ್ತು  ಕಲ್ಲಡ್ಕ ಶ್ರೀ ರಾಮ ಪ. ಪೂ. ಕಾಲೇಜಿನ ವಿದ್ಯಾರ್ಥಿನಿ ಗಾಯತ್ರಿ ದ್ವಿತೀಯ ಸ್ಥಾನ ಗಳಿಸಿದರು. ಕೊಲಾಜ್ ಸ್ಪರ್ಧೆ- ಕಲ್ಲಡ್ಕ ಶ್ರೀ ರಾಮ ಪ. ಪೂ. ಕಾಲೇಜಿನ ವಿದ್ಯಾರ್ಥಿ ಹರಿಚರಣ್ ಪ್ರಥಮ ಮತ್ತು ಮಂಗಳೂರು ಮಿಲಾಗ್ರೀಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೆಲ್ರಿಕ್ ದ್ವಿತೀಯ ಬಹುಮಾನ ಪಡೆದರು. ರಸಪ್ರಶ್ನೆ ಸ್ಪರ್ಧೆ-ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಪ್ರಥಮ ಮತ್ತು ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜು ದ್ವಿತೀಯ ಬಹುಮಾನ ಪಡೆದರು. ಕಿರುಪ್ರಹಸನ ಸ್ಪರ್ಧೆ ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜು ಪ್ರಥಮ ಮತ್ತು ದೇರಳಕಟ್ಟೆ ಕಣಚೂರು ಪ.ಪೂ. ಕಾಲೇಜು ದ್ವಿತೀಯ ಸ್ಥಾನ ಗಳಿಸಿದರು.

ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಮತ್ತು ವಿಕಾಸ್-೨೦೧೭ರ ಸಂಯೋಜಕ ಬಾಲಕೃಷ್ಣ ಗೌಡ ಉಪಸ್ಥಿತರಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕಿ ಶಾಲಿನಿ ಬಿ. ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಫರ್ಧೆ ವಿಕಾಸ್ -೨೦೧೭ರಲ್ಲಿ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಕನ್ನಡ ಉಪನ್ಯಾಸಕಿ ಅಪರ್ಣ ಸ್ವಾಗತಿಸಿ, ಗಣಿತಶಾಸ್ತ್ರ ಉಪನ್ಯಾಸಕಿ ಕವಿತಾ ಕಾರ್‍ಯಕ್ರಮ ನಿರೂಪಿಸಿದರು. ಹಿಂದಿ ಉಪನ್ಯಾಸಕಿ ದಿವ್ಯಲಕ್ಷ್ಮಿ ವಂದಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ