ಬಂಟ್ವಾಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನೆ

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜು, ಕಕ್ಯಪದವಿನಲ್ಲಿ ೨೦೧೭ – ೧೮ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಯಕ್ಷಗಾನದ ಸಿಂಚನದೊಂದಿಗೆ ಜರುಗಿತು.

ಜಾಹೀರಾತು

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ಸಂಚಾಲಕ ರೋಹಿನಾಥ್ ಪಾದೆ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸ್ಪರ್ಧಾ ಮನೋಭಾವವನ್ನು ಕ್ರೀಡಾಳುಗಳು ಬೆಳೆಸಿಕೊಳ್ಳಿ ಎಂದು ಶುಭ ಹಾರೈಸಿದರು.

ಶ್ರೀ ಪಂಚದುರ್ಗಾ ಪ್ರೌಢಶಾಲೆ, ಕಕ್ಯಬೀಡಿನ ಮುಖ್ಯ ಶಿಕ್ಷಕರಾದ ಜಗನ್ನಾಥ್ ಶೆಟ್ಟಿ, ಮುಖ್ಯ ಅತಿಥಿಯಾಗಿ ಮಾತನಾಡಿ, ಪಂದ್ಯಾಟವು ಸೌಹಾರ್ದಯುತವಾಗಿ ನಡೆಯಲಿ ಎಂದು ಆಶಿಸಿದರು.

ಸಂಸ್ಥೆಯ ಪ್ರಾಂಶುಪಾಲ ಪ್ರವೀಣ್ ಎ ಅಧ್ಯಕ್ಷತೆ ವಹಿಸಿದ್ದರು. ಎಲ್.ಸಿ.ಆರ್. ಇಂಡಿಯನ್ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಕು. ನಿಶಾ ಹಾಗೂ ತ್ರೋಬಾಲ್ ಪಂದ್ಯಾಟದ ಮುಖ್ಯ ನಿರೀಕ್ಷಕರು ಉಪಸ್ಥಿತರಿದ್ದರು.

ಜಾಹೀರಾತು

ವಾಣಿಜ್ಯ ವಿಭಾಗದ ಮುಖ್ಯಸ್ಥ ಶಿವರಾಜ್ ಗಟ್ಟಿ ಸ್ವಾಗತಿಸಿ, ಉಪನ್ಯಾಸಕಿ ದಿವ್ಯಶ್ರೀ ವಂದಿಸಿ, ಕಲಾ ವಿಭಾಗದ ಮುಖ್ಯಸ್ಥೆ ವಿಂದ್ಯಾಶ್ರೀ ಹಾಗೂ ಉಪನ್ಯಾಸಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.

ಎಲ್.ಸಿ.ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜು ಕಕ್ಯಪದವು 2017-2018 ಇಲ್ಲಿ ನಡೆದ ಬಂಟ್ವಾಳ ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಎಲ್.ಸಿ.ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜು ಕಕ್ಯಪದವು ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*