ಕುಮ್ಕಿ, ಪರಂಬೋಕು, ಗೋಮಾಳ, ಅರಣ್ಯ ವ್ಯಾಪ್ತಿಯಲ್ಲಿ ಇರುವ ಜನರು ಮನೆ ನಿರ್ಮಿಸಲು ಇದ್ದ ಕಾನೂನು ತೊಡಕನ್ನು ನಿವಾರಿಸಿ ಹಕ್ಕು ಪತ್ರವನ್ನು ನೀಡುವ ಕಾರ್ಯಕ್ರಮವನ್ನು ರಾಜ್ಯ ಸರಕಾರ ಹಮ್ಮಿಕೊಂಡಿದೆ. ಆ ಮೂಲಕ ರಾಜ್ಯದ ಎಲ್ಲಾ ಬಡಜನರಿಗೂ ಸೂರು ಒದಗಿಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಅಲ್ಲಿಪಾದೆ ಸೌಹಾರ್ಧ ಸಭಾಭವನದಲ್ಲಿ ಶುಕ್ರವಾರ ಸಂಜೆ ಸರಪಾಡಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ೯೪ ಸಿ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.
ಜಿ.ಪಂ.ಸದಸ್ಯ ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ ಬಂಗೇರ, ತಾ.ಪಂ.ಸದಸ್ಯೆ ಸ್ವಪ್ನ ವಿಶ್ವನಾಥ ಪೂಜಾರಿ, ಅಲ್ಲಿಪಾದೆ ಚರ್ಚ್‌ನ ಧರ್ಮಗುರು ರೆ.ಫಾ. ಗ್ರೆಗರಿ ಪಿರೇರಾ ಗ್ರಾ.ಪಂ. ಸದಸ್ಯರಾದ ಗೀತಾ ದೇವಾಡಿಗ, ಶಶಿಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸರಪಾಡಿ ಪಂಚಾಯಿತಿ ಸದಸ್ಯ ದಯಾನಂದ ಶೆಟ್ಟಿ ಅಮೆ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ನವೀನ್ ಪ್ರಾಸ್ತವಿಕವಾಗಿ ಮಾತನಾಡಿದರು. ಗ್ರಾ.ಪಂ.ಸದಸ್ಯ ವಿನ್ಸೆಂಟ್ ಪಿಂಟೋ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Be the first to comment on "ರಾಜ್ಯದ ಎಲ್ಲಾ ಬಡಜನರಿಗೂ ಸೂರು ಒದಗಿಸುವ ಕಾರ್ಯ"