ಬಂಟ್ವಾಳ

ತ್ಯಾಜ್ಯ ವಿಲೇವಾರಿ: ಪುರಸಭೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ

ಬಂಟ್ವಾಳ ಪುರಸಭೆಯ ತ್ಯಾಜ್ಯ ವಿಲೇವಾರಿ ಬಗ್ಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪುರಸಭೆಗೆ ಖಡಕ್ ಸೂಚನೆಗಳನ್ನು ನೀಡಿದೆ.

ಜಾಹೀರಾತು

ಮಂಡಳಿಯ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್ ನೇತೃತ್ವದಲ್ಲಿ ಸೋಮವಾರ ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ಹಾಗೂ ಸಹಾಯಕ ಅಧಿಕಾರಿ ವಿವೇಕ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹಗೊಳ್ಳುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು ಬಿ.ಸಿ.ರೋಡಿನ ಮುಖ್ಯವೃತ್ತದ ಬಳಿ ವಾಹನಗಳಿಗೆ ಕಸ ವರ್ಗಾಯಿಸುವ ಸ್ಥಳವನ್ನು ನೋಡಿ ಪುರಸಭೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಿ.ಸಿ.ರೋಡಿನ ಖಾಸಗಿ ಬಸ್ಸು ನಿಲ್ದಾಣದ ಬಳಿ ಕಸದ ರಾಶಿಯಿಂದ ಉಂಟಾಗುತ್ತಿರುವ ಸಮಸ್ಯೆಯ ಬಗ್ಗೆ ಸ್ಥಳೀಯರಾದ ಡಾ. ಬಾಲಕೃಷ್ಣ, ರಾಜೇಂದ್ರ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಕಸ ಎಸೆಯುವವರ ಬಗ್ಗೆ ನಿಗಾ ವಹಿಸಲು ಸಿಸಿ ಕ್ಯಾಮಾರ ಅಳವಡಿಸುವಂತೆ ಪಿಯೂಸ್ ರೋಡ್ರಿಗಸ್ ಸೂಚಿಸಿದರು.

ಸ್ಥಳೀಯರ ಸಲಹೆಯ ಮೇರೆಗೆ ಕಸ ರಾಶಿ ಬೀಳುತ್ತಿರುವ ಸ್ಥಳದಲ್ಲಿ ವಾಹನ ಪಾರ್ಕಿಂಗ್ ಅಥವಾ  ಹೂವಿನ ಗಿಡಗಳ ಪಾರ್ಕ್ ಮಾಡಿ ಸಮಸ್ಯೆ ಬಗೆ ಹರಿಸುವುದಾಗಿ ಮುಖ್ಯಾಧಿಕಾರಿ ರೇಖ ಶೆಟ್ಟಿ ತಿಳಿಸಿದರು. ಈ ಸಂದರ್ಭ ಸ್ವರ್ಣೋದ್ಯಮಿ ಸುನೀಲ್ ಅವರು ಇದಕ್ಕೆ ಬೇಕಾದ ಪೂರಕ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಪಾಣೆಮಂಗಳೂರು ,ಬಡ್ಡಕಟ್ಟೆ, ಜಕ್ರಿಬೆಟ್ಟು, ಲೊರೆಟ್ಟೋ ಪ್ರದೇಶಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಆರೋಗ್ಯಾಧಿಕಾರಿ ರತ್ನಪ್ರಸಾದ್ ಜತೆಗಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಈಶ್ವರನ ಹೂದೋಟವೆನಿಸಿದ ಪದ್ಯಾಣದಲ್ಲಿ ಬ್ರಹ್ಮಕಲಶೋತ್ಸವ, ಮಾರ್ಚ್30ರಿಂದ ಏ.6ರವರೆಗೆ ಕಾರ್ಯಕ್ರಮ

| ಮಾರ್ಚ್ 30ರಂದು ಏಕಾದಶ ನದಿಗಳ ಪುಣ್ಯ ತೀರ್ಥಗಳ ಭವ್ಯ ಮೆರವಣಿಗೆ | ಸಂತರು, ಕೇಂದ್ರ ಸಚಿವರು, ಡಿಸಿಎಂ ಸಹಿತ…

24 hours ago