1.72 ಕೋಟಿ ರೂ. ವೆಚ್ಚದಲ್ಲಿ ಬಿ.ಸಿ.ರೋಡ್ ಸರ್ವೀಸ್ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು, ತೆರವು ಕಾರ್ಯಾಚರಣೆ ಸಹಿತ ಹಲವು ಪ್ರಕ್ರಿಯೆಗಳು ಪೂರ್ಣಗೊಂಡು ಎರಡು ತಿಂಗಳ ಬಳಿಕ ಸಂಪೂರ್ಣವಾಗಿ ಜನರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬುಧವಾರ ಬಿ.ಸಿ.ರೋಡಿನ ಸರ್ವೀಸ್ ರಸ್ತೆಯ ಕಾಮಗಾರಿ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಸಿ.ರೋಡಿನ ಸುಮಾರು550 ಮೀಟರ್ ಉದ್ದದ ಸರ್ವೀಸ್ ರಸ್ತೆಯ ಕಾಂಕ್ರೀಕರಣ ಕಾಮಗಾರಿ 1.72 ಕೋಟಿ ರೂ. ವೆಚ್ಚದಲ್ಲಿ ನಡೆಯಲಿದೆ. ಸರ್ವೀಸ್ ರಸ್ತೆಯಲ್ಲಿ ಪರಿಹಾರ ಪಡೆದುಕೊಂಡು ಇನ್ನೂ ತೆರವು ಮಾಡದ ಸುಮಾರು 12 ಕಟ್ಟಡಗಳ ಸಹಿತ ರಾ.ಹೆ.ಗಳಲ್ಲಿ ನಿರ್ಮಿಸುತ್ತಿರುವ ಖಾಸಗಿ ಬಸ್ ತಂಗುದಾಣಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, 2019ರಲ್ಲಿ ಸಂಪೂರ್ಣಗೊಳ್ಳಲಿದೆ ಎಂದ ಅವರು, ಬಿ.ಸಿ.ರೋಡ್ – ಪೊಳಲಿ ಕಟೀಲು ರಸ್ತೆ, ಮೇಲ್ಕಾರ್ ತೊಕ್ಕೊಟ್ಟು ರಸ್ತೆ ಎನ್.ಎಚ್.ಎ.ಐ.ಗೆ ಹಸ್ತಾಂತರ ಮಾಡಲಾಗಿದೆ. ಸಿದ್ಧಕಟ್ಟೆ – ಮೂಡುಬಿದಿರೆ ಪಿಡಬ್ಲುಡಿಗೆ ಹಸ್ತಾಂತರ ಮಾಡಲಾಗಿದೆ ಎಂದರು.
ಈ ಸಂದರ್ಭ ಮಾಜಿ ಶಾಸಕ ರುಕ್ಮಯ ಪೂಜಾರಿ, ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ದೇವದಾಸ್ ಶೆಟ್ಟಿ, ಗೋವಿಂದ ಪ್ರಭು, ಸುಲೋಚನಾ ಜಿ.ಕೆ. ಭಟ್, ಜಿ.ಆನಂದ, ಚೆನ್ನಪ್ಪ ಕೋಟ್ಯಾನ್, ರಾಮ್ದಾಸ್ ಬಂಟ್ವಾಳ, ಸುಗುಣ ಕಿಣಿ, ರವೀಂದ್ರ ಕಂಬಳಿ, ಮಹಾಬಲ ಶೆಟ್ಟಿ, ಮೋನಪ್ಪ ದೇವಸ್ಯ, ರಮಾನಾಥ ರಾಯಿ, ಸಂತೋಷ್ ರಾಯಿಬೆಟ್ಟು, ಗಣೇಶ್ ರೈ ಮಾಣಿ, ಸೀತಾರಾಮ್ ಪೂಜಾರಿ, ರಾ.ಹೆ.ಪ್ರಾ. ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
BANTWALNEWS VIDEO:
Be the first to comment on "1.72 ಕೋಟಿ ರೂ. ವೆಚ್ಚದ ಸರ್ವೀಸ್ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಚಾಲನೆ"