ಕಾಂಗ್ರೆಸ್ ನ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಸಮಿತಿ ಆಶ್ರಯದಲ್ಲಿ ತಾಲೂಕು ಪಂಚಾಯತ್ ಕಚೇರಿ ಬಳಿ ಕಾರ್ಯಕರ್ತರ ಸಮಾವೇಶ ಶನಿವಾರ ಸೆ.23ರಂದು ನಡೆಯಲಿದೆ.
ಅಪರಾಹ್ನ 2.30ರ ಬಳಿಕ ಬಂಟ್ವಾಳ ತಾಲೂಕು ಪಂಚಾಯತ್ ಕಚೇರಿ ಬಳಿ ನಡೆಯುವ ಈ ಕಾರ್ಯಕ್ರಮವನ್ನು ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಪಿ.ಎಸ್.ವಿಷ್ಣುನಾಥ್ ಉದ್ಘಾಟಿಸುವರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರಾಜಕುಮಾರ್ ಭಾಗವಹಿಸುವರು ಎಂದು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "23ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ"