ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿದಾಗ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಫಲ್ಗುಣಿ ಸ್ರ್ತೀ ಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ವಾರ್ಷಿಕ ಮಹಾ ಸಭೆ ಮತ್ತು ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ಉಚಿತ ಚಿಕಿತ್ಸಾ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಆರ್ಥಿಕವಾಗಿ, ರಾಜಕೀಯವಾಗಿ ಸಾಮಾಜಿಕವಾಗಿ ಎಲ್ಲ ರೀತಿಯಿಂದಲೂ ಮಹಿಳೆಯರನ್ನು ಬಲಿಷ್ಠರನ್ನಾಗಿ ಮಾಡಲು ಮತ್ತು ಹೆಣ್ಮಕ್ಕಳ, ಮಕ್ಕಳ ಕಲ್ಯಾಣಕ್ಕೆ ನಾನಾ ಕಾರ್ಯಕ್ರಮಗಳನ್ನು ಸರಕಾರ ಹಮ್ಮಿಕೊಂಡಿದೆ ಎಂದರು.
ಸ್ತ್ರೀ ಶಕ್ತಿ ಸಂಘಗಳು ಸಹಕಾರಿ ಸಂಘಗಳನ್ನು ಸ್ವತಂತ್ರವಾಗಿ ಸ್ಥಾಪಿಸಿದ ಕಾರಣ ಹೆಣ್ಮಕ್ಕಳು ಸ್ವಾಭಿಮಾನಿ ಬದುಕು ಸಾಗಿಸಲು ಸಹಕಾರಿಯಾಗಿದೆ. ಸರಕಾರ ಇಲಾಖೆಯ ಮೂಲಕ ಅಂಗನವಾಡಿಗಳಲ್ಲಿ ಅಗತ್ಯ ಅಹಾರದ ಜೊತೆ ಗರ್ಭಿಣಿಯರಿಗೆ ಮಾತೃಪೂರ್ಣ ಯೋಜನೆ ಹಮ್ಮಿಕೊಂಡಿದೆ ಎಂದರು.
ಅಧ್ಯಕ್ಷತೆಯನ್ನು ಫಲ್ಗುಣಿ ಸ್ರ್ತೀಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷೆ ಗೀತಾ ಜಯತೀರ್ಥ ವಹಿಸಿದ್ದರು.
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸುಧಾ ಜೋಶಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಮಾಯಿಲಪ್ಪ ಸಾಲ್ಯಾನ್, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ| ಸಹನಾ ಶೆಟ್ಟಿ, ಸಾಂತ್ವಾನ ಕೇಂಧ್ರದ ಸಮಾಜ ಕಾರ್ಯಕರ್ತ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಸಹಕಾರಿ ಸಂಘದ ಅಭಿವೃದ್ದಿಗೆ ಸಹಕಾರ ನೀಡಿದ ಉಸ್ತುವಾರಿ ಸಚಿವ ಬಿ.ರಮನಾಥ ರೈ ಅವರನ್ನು ಗೌರವಿಸಲಾಯಿತು ಮತ್ತು ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅವರು ಸಂಘಕ್ಕೆ ನೀಡಿದ ಉಚಿತ ಕಂಪ್ಯೂಟರನ್ನು ಸಚಿವರ ಮೂಲಕ ಸಂಘದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಫಲ್ಗುಣಿ ಸ್ರ್ತೀ ಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ಉಪಾಧ್ಯಕ್ಷೆ ಮಲ್ಲಿಕಾ ಶೆಟ್ಟಿ ಸ್ವಾಗತಿಸಿ ನಿರ್ದೇಶಕಿ ಸುನೀತಾ ವಂದಿಸಿದರು.