ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕುತ್ತಾರು ಕಚೇರಿಗೆ ಮತ್ತು ಬ್ಯಾನರಿಗೆ ಕಿಡಿಗೇಡಿಗಳು ಹಾನಿಗೊಳಿಸಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಘಟಕ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರ ಮೂಲಕ ದ.ಕ. ಜಿಲ್ಲಾಧಿಕಾರಿಯವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ತುಳುನಾಡ ರಕ್ಷಣಾ ವೇದಿಕೆ ಕರಾವಳಿ ಜಿಲ್ಲೆಯಾದ್ಯಂತ ಘಟಕಗಳನ್ನು ಹೊಂದಿದ್ದು, ತುಳುನಾಡು, ನುಡಿ, ಭಾಷೆ, ಸಂಸ್ಕೃತಿ ಪರವಾಗಿ ಹಾಗೂ ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ, ಸಮಾಜ ವಿರೋಧಿ ಕೃತ್ಯಗಳ ವಿರುದ್ಧ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ಬಂದಿದೆ. ಇದನ್ನು ಸಹಿಸದ ಸಮಾಜ ವಿರೋಧಿ ಶಕ್ತಿಗಳು ಕುತ್ತಾರು ಕಚೇರಿಗೆ ಸೆ. ೧೭ರ ರಾತ್ರಿ ಹಾನಿ ಮಾಡಿದ್ದು, ಬ್ಯಾನರ್ ಅನ್ನು ಹರಿದಿದ್ದಾರೆ. ಆದುದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಂಟ್ವಾಳ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಲ್ಲಿ ಬಂಟ್ವಾಳ ಘಟಕ ವಿನಂತಿಸಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಘಟಕ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ, ಪದಾಧಿಕಾರಿಗಳಾದ ಎಚ್ಕೇ ನಯನಾಡು, ಗಣೇಶ್ ಕಾಮಾಜೆ, ಸಂತೋಷ್ ಮೂರ್ಜೆ, ಗಿರೀಶ್ ಅನಿಲಡೆ, ಹರೀಶ್ ಶೆಟ್ಟಿ ವಾಮದಪದವು, ಪ್ರವೀಣ್ ಶೆಟ್ಟಿ ಕುರ್ಡುಮೆ ಉಪಸ್ಥಿತರಿದ್ದರು.
Be the first to comment on "ತಪ್ಪಿತಸ್ಥರ ವಿರುದ್ಧ ಕ್ರಮ: ತುರವೇ ಒತ್ತಾಯ"