ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದ ಕಾಂಗ್ರೆಸ್ ನಾಯಕ ಎ. ಅಬ್ದುಲ್ ಜಲೀಲ್ ಕರೋಪಾಡಿ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
2017ರ ಎಪ್ರಿಲ್ 20ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ನಾಲ್ಕು ಬೈಕ್ಗಳಲ್ಲಿ ಬಂದ 8 ಮಂದಿಯ ತಂಡ ಕರೋಪಾಡಿ ಗ್ರಾಮ ಪಂಚಾಯತ್ ಕಚೇರಿಯ ಅಧ್ಯಕ್ಷ, ಉಪಾಧ್ಯಕ್ಷರ ಕೊಠಡಿಯೊಳಗೆ ಕರ್ತವ್ಯದಲ್ಲಿದ್ದ ಅಬ್ದುಲ್ ಜಲೀಲ್ ಕರೋಪಾಡಿಯವರನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿ ಎಪ್ರಿಲ್ 30ರಂದು 11 ಮಂದಿ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಕೆಲವು ದಿನಗಳ ಬಳಿಕ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದರು.