ಬಂಟ್ವಾಳ

ಬಂಟ್ವಾಳದಲ್ಲಿ ಅ.1ರಂದು ಅಡಿಗ ಕುರಿತು ವಿಚಾರಸಂಕಿರಣ

ಕನ್ನಡದ ಪ್ರಸಿದ್ಧ ಕವಿ ಗೋಪಾಲಕೃಷ್ಣ ಅಡಿಗರ ಜನ್ಮಶತಮಾನೋತ್ಸವವನ್ನು ಬಂಟ್ವಾಳ ಜೋಡುಮಾರ್ಗದ ಮೊಗೇರಿ ಗೋಪಾಲಕೃಷ್ಣ ಅಡಿಗ ಶತಮಾನೋತ್ಸವ ಸಮಿತಿ ವತಿಯಿಂದ ಅಕ್ಟೋಬರ್ 1ರಂದು ದಿನಪೂರ್ತಿ ಸಾಹಿತ್ಯ ವಿಚಾರಸಂಕಿರಣ ಏರ್ಪಡಿಸುವ ಮೂಲಕ ಆಚರಿಸಲಾಗುವುದು ಎಂದು ಹಿರಿಯ ಸಾಹಿತಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಹೇಳಿದರು.


ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರವೇ ಈ ಕಾರ್ಯಕ್ರಮ ಮಾಡಬೇಕಿತ್ತು. ಈ ಕುರಿತು ಕೆಲ ಬಾರಿ ಸಂಪರ್ಕಿಸಿದಾಗಲೂ ಸೂಕ್ತ ಸ್ಪಂದನೆ ದೊರಕಲಿಲ್ಲ. ಈ ನಿಟ್ಟಿನಲ್ಲಿ ಸಾಹಿತ್ಯಾಸಕ್ತರನ್ನು ಒಡಗೂಡಿಸಿಕೊಂಡು ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಲಯನ್ಸ್ ಭವನದಲ್ಲಿ ಆಚರಿಸಲಾಗುತ್ತಿದೆ. ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಮ್ಮ ಬಂಟ್ವಾಳ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಅಭಿರುಚಿ ಜೋಡುಮಾರ್ಗ ಮೊದಲಾದ ಸಂಘಟನೆಗಳು ಸಹಕರಿಸಲಿವೆ ಎಂದು ಡಾ. ಆಳ್ವ ಹೇಳಿದರು. ನಾನಾ ಕಾಲೇಜುಗಳ ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಇದರಲ್ಲಿ ಭಾಗವಹಿಸುವರು ಎಂದ ಅವರು ಅಡಿಗರ ಕುಟುಂಬದವರೂ ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.


ನಾನಾ ಕಾಲೇಜುಗಳ ವಿದ್ಯಾರ್ಥಿಗಳು, ಸಾಹಿತ್ಯಾಸಕ್ತರು ಇದರಲ್ಲಿ ಭಾಗವಹಿಸುವರು ಎಂದ ಅವರು ಅಡಿಗರ ಕುಟುಂಬದವರೂ ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು.

ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕನ್ನಡ ಭಾಷಾ ಸಲಹಾ ಮಂಡಳಿ ಸಂಚಾಲಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಉದ್ಘಾಟಿಸುವರು. ಪ್ರಧಾನ ಅತಿಥಿಯಾಗಿ ವಿಮರ್ಶಕ ಡಾ.ಎಚ್.ಎಸ್.ರಾಘವೇಂದ್ರ ರಾವ್ ಭಾಗವಹಿಸುವರು. ಈ ಸಂದರ್ಭ ಎಚ್. ಚಂದ್ರಶೇಖರ ಕೆದ್ಲಾಯ ಮತ್ತು ರೂಪಶ್ರೀ ನಾಗರಾಜ್ ಅಡಿಗರ ಕಾವ್ಯಗಾಯನ ನಡೆಸುವರು.

ಬೆಳಗ್ಗೆ ಅಡಿಗರ ಗದ್ಯ ಸಾಹಿತ್ಯ ಕುರಿತು ವಿಶ್ರಾಂತ ಪ್ರಾಧ್ಯಾಪಕ ಡಾ. ಆರ್. ನರಸಿಂಹಮೂರ್ತಿ ಉಪನ್ಯಾಸ ನೀಡುವರು. ಬಳಿಕ ಅಡಿಗರ ಕಾವ್ಯಾನುಸಂಧಾನ ಕುರಿತು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಉಪನ್ಯಾಸ ನೀಡುವರು. ಅದಾದ ಬಳಿಕ ಅಪರಾಹ್ನ ಅಡಿಗರ ಕಾವ್ಯದ ಕುರಿತು ಎಸ್.ಆರ್.ವಿಜಯಶಂಕರ ಮಾತನಾಡುವರು. ಅಡಿಗರು ಮತ್ತು ಪ್ರಕೃತ ನಮ್ಮ ಸಾಹಿತ್ಯ ಧರ್ಮ ವಿಚಾರದ ಕುರಿತು ಡಾ. ವರದರಾಜ ಚಂದ್ರಗಿರಿ ಮಾತನಾಡುವರು.

ಮಧ್ಯಾಹ್ನ 3.15ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ಹಂಪಿ ವಿವಿ ವಿಶ್ರಾಂತ ಕುಲಪತಿ ಡಾ. ಬಿ.ಎ.ವಿವೇಕ ರೈ ಸಮಾರೋಪ ಭಾಷಣ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಜಾನಪದ ವಿವಿ ವಿಶ್ರಾಂತ ಕುಲಪತಿ ಡಾ. ಕೆ.ಚಿನ್ನಪ್ಪ ಗೌಡ ವಹಿಸುವರು. ಇದೇ ಸಂದರ್ಭ ಅಡಿಗರ ಸಹೋದರರನ್ನು ಗೌರವಿಸುವ ಕಾರ್ಯ ಹಾಗೂ ಅಡಿಗರ ಕುರಿತು ನಡೆದ ಪ್ರಬಂಧ ಸ್ಪರ್ಧಾವಿಜೇತರನ್ನು ಗುರುತಿಸಿ, ಗೌರವಿಸುವ ಕಾರ್ಯ ನಡೆಯಲಿದೆ. ಸಮಾರೋಪ ಸಮಾರಂಭ ಮುಗಿದ ಬಳಿಕ ವಾಲಿ ಮೋಕ್ಷ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಡಾ. ಏರ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷರಾದ ವಿಶ್ವನಾಥ ಬಂಟ್ವಾಳ, ಕಸಾಪ ತಾಲೂಕು ಘಟಕ ಅಧ್ಯಕ್ಷ ಕೆ. ಮೋಹನ ರಾವ್, ಸಮಿತಿ ಕೋಶಾಧಿಕಾರಿ ಬಿ.ತಮ್ಮಯ್ಯ, ಕಾರ್ಯದರ್ಶಿ ಡಾ. ಅಜಕ್ಕಳ ಗಿರೀಶ ಭಟ್ಟ ಮತ್ತು ಮಹಾಬಲೇಶ್ವರ ಹೆಬ್ಬಾರ ಉಪಸ್ಥಿತರಿದ್ದರು.

video report:

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts