ಜಿಲ್ಲಾ ಸುದ್ದಿ

Sep 28- Oct 5: ಮದ್ಯದಂಗಡಿ ಮುಚ್ಚಲು ಆದೇಶ

ಶ್ರೀ ಶಾರದಾ ಹಬ್ಬದ ಸಮಯ ವೈಭವದ ಶೋಭಾಯಾತ್ರೆ ನಡೆಯಲಿರುವುದರಿಂದ ಮುಂಜಾಗರೂಕತೆ ವಹಿಸಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಬಂಟ್ವಾಳನಗರ, ಬಂಟ್ವಾಳ ಗ್ರಾಮಾಂತರ, ವಿಟ್ಲ, ಉಪ್ಪಿನಂಗಡಿ, ಪುಂಜಾಲ್‍ಕಟ್ಟೆ, ಸುಬ್ರವಣ್ಯ ಪೊಲೀಸ್ ಠಾಣೆ, ಧರ್ಮಸ್ಥಳ, ಬೆಳ್ತಂಗಡಿ ಠಾಣೆ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ ಠಾಣೆ, ಸುಳ್ಯ ಠಾಣೆ, ಬೆಳ್ಳಾರೆ ಇಲ್ಲಿ ಬಾರ್& ರೆಸ್ಟೋರೆಂಟ್ ಮತ್ತು ವೈನ್ ಶಾಪ್/ ಮದ್ಯ ಮಾರಾಟ ಕೇಂದ್ರಗಳನ್ನು ಆಯಾಯ ದಿನಾಂಕ ಮತ್ತು ಸ್ಥಳಗಳಲ್ಲಿ ಸೆಪ್ಟಂಬರ್ 28 ರಿಂದ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 5 ರ ಬೆಳಿಗ್ಗೆ 6 ಗಂಟೆವರೆಗೆ ಬಂದ್ ಇರಿಸುವಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ದ.ಕ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಿಹಾಗೂ ನಿಷೇದಾಜ್ಞೆ ಇರುವ ಸಮಯದಲ್ಲಿ ಆ ವ್ಯಾಪ್ತಿಗೊಳಪ್ಟ್ ವೈನ್ ಶಾಪ್, ಬಾರ್‍ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು(ಸೀಲು) ಗಳನ್ನು ಕಡ್ಡಾಯವಾಗಿ ಮಾಡುವಂತೆ ವ್ಯವಸ್ಥೆಗೊಳಿಸಲು ಆದೇಶಿಸಲಾಗಿದೆ.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts