ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಗೆ ಪ್ರಶಸ್ತಿ

ಸಾರ್ವಜನಿಕ ಶಿಕ್ಷಣ ಇಲಾಖೆ, ಡಿಎಸ್‌ಇಆರ್‌ಟಿ ಮತ್ತು ಹಾಸನ ಡಯಟ್ ಇವರ ಆಶ್ರಯದಲಿ ಹಾಸನದ ಫಿಲೋಮಿನಾ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ  ಹಾಸನ ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ’ಗಂಗೆಯ ಗೋಳು’ ನಾಟಕ ದ್ವಿತೀಯ  ಸ್ಥಾನಗಳಿಸಿದೆ.

ಪತ್ರಕರ್ತ, ರಂಗಕರ್ಮಿ ಮೌನೇಶ ವಿಶ್ವಕರ್ಮ ನಿರ್ದೇಶಿಸಿದ ಈ ನಾಟಕದಲ್ಲಿ ಶಾಲೆಯ ವಿದ್ಯಾರ್ಥಿ ಗಳಾದ ಜೋಲ್ಸ್ಟನ್ ಸೆರಾವೋ, ಪ್ರಣೀತ್, ಶ್ರೀಯ ಆಳ್ವ, ಸಂಜನಾ ರೈ, ವಿಂದ್ಯಾ ಕೈಂತಜೆ, ಪ್ರಣಮ್ಯ , ಶ್ರೇಯಾ ,ಯಶ್ಮಿತಾ ಅಭಿನಯಿಸಿದ್ದಾರೆ.

ಶಿಕ್ಷಕರಾದ ಮಂಜುಳಾ ಎಚ್.ಗೌಡ, ಸುಧಾ ಎನ್ ರಾವ್ ಮಾರ್ಗದರ್ಶನ ನೀಡಿದ್ದಾರೆ. ವಿಜೇತ ನಾಟಕತಂಡವನ್ನು ಶಾಲಾ ಸಂಚಾಲಕ ಪ್ರಹ್ಲಾದ್ ಜೆ ಶೆಟ್ಟಿ, ಆಡಳಿತಾಧಿಕಾರಿ ಸಿ.ಶ್ರೀಧರ್, ಮುಖ್ಯೋಪಾಧ್ಯಾಯರಾದ ವಿಜಯಲಕ್ಷ್ಮೀ ವಿ ಶೆಟ್ಟಿ, ಗ್ರೇಸ್ ಪಿ ಸಲ್ದಾನ ಅಭಿನಂದಿಸಿದ್ದಾರೆ.

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ.




  


  

  

Be the first to comment on "ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಗೆ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*