ಬಂಟ್ವಾಳ

ಪಾಣೆಮಂಗಳೂರು ಚಾತುರ್ಮಾಸ – ಶ್ರೀ ಪಂಚ ಪರಮೇಷ್ಠಿ ಆರಾಧನೆ

ಬಂಟ್ವಾಳ: ಪರಮ ಪೂಜ್ಯ 108 ಮುನಿ ಶ್ರೀ ವೀರ ಸಾಗರ ಮಹಾರಾಜರ ಮಂಗಲ ವರ್ಷಾಯೋಗ ನಿಮಿತ್ತ, ಪಾಣೆಮಂಗಳೂರು ಶ್ರೀಅನಂತನಾಥ ಸ್ವಾಮೀ ಜಿನ ಚೈತ್ಯಾಲಯದಲ್ಲಿ, ಭಾನುವಾರ ಅಕ್ಟೋಬರ್ 1ರಂದು ಸುಮನಾಜಿ ಅಮ್ಮ ಮತ್ತು ಮಕ್ಕಳು, ಜೈನರ ಪೇಟೆ, ಪಾಣೆಮಂಗಳೂರು ಪ್ರಾಯೋಜಕತ್ವದಲ್ಲಿ ಪರಮ ಪೂಜ್ಯ 108 ಮುನಿಶ್ರೀ ವೀರ ಸಾಗರ ಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ಕನಕಗಿರಿ ಕ್ಷೇತ್ರದ ಪರಮ ಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ, ಪೂರ್ವಾಹ್ನ 9 ರಿಂದ ಶ್ರೀ ಪಂಚ ಪರಮೇಷ್ಠಿ ಆರಾಧನೆ ನಡೆಯಲಿದೆ.

ಈ ಸಾಮೂಹಿಕ ಆರಾಧನೆಗೆ ಕುಳಿತುಕೊಳ್ಳುವ ಶ್ರಾವಕರು ಚಾತುರ್ಮಾಸ ಸಮಿತಿಯನ್ನು ಸಂಪರ್ಕಿಸಿ ನೋಂದಾಯಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಜಾಹೀರಾತು

ಅಪರಾಹ್ನ 3ರಿಂದ  ಧಾರ್ಮಿಕ ಸಭೆಯಲ್ಲಿ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಗಣಧರ ಪೀಠದಿಂದ ಮಂಗಲ ಪ್ರವಚನ, ಶಂಕಾ ಸಮಾಧಾನ, ಶ್ರಾವಕರ ಧಾರ್ಮಿಕ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಧರ್ಮಸಭೆಯಲ್ಲಿ ಸ್ವಸ್ತಿಶ್ರೀ ಶ್ರೀ ಕ್ಷೇತ್ರ ಕನಕಗಿರಿ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯ ನಳಿನ್ ಕುಮಾರ್ ಕಟೀಲು ಅತಿಥಿಗಳಾಗಿ ಭಾಗವಹಿಸುವರು ಎಂದು ಚಾತುರ್ಮಾಸ ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಸುದರ್ಶನ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts