ಕನ್ನಡದ ಹೆಸರಾಂತ ಕವಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಜನ್ಮ ಶತಮಾನೋತ್ಸವದ ಪ್ರಯುಕ್ತ ಅಕ್ಟೋಬರ್ ಒಂದರ ವಿಚಾರಸಂಕಿರಣದ ಹಿನ್ನೆಲೆಯಲಿ, ಅಡಿಗ: ಒಂದು ಜನಾಂಗದ ಕಣ್ಣು ತೆರೆಸಿದ ಕವಿ ಎಂಬ ವಿಷಯದ ಬಗ್ಗೆ ಪ್ರಬಂಧಗಳನ್ನು ಆಹ್ವಾನಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಮುಂಬೈ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಗೋವಿಂದ ಭಟ್ ಅವರು 2 ಸಾವಿರ ರೂಪಾಯಿ ನಗದು ಬಹುಮಾನವುಳ್ಳ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಉಜಿರೆಯ ಶ್ರೀ ಧ.ಮಂ. ಕಾಲೇಜಿನ ದ್ವಿತೀಯ ಬಿಕಾಂ ವಿದ್ಯಾರ್ಥಿ ಕಿರಣಕುಮಾರ ರೋಣದ ಅವರು ದ್ವಿತೀಯ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿದ್ಯಾರ್ಥಿ ಮಹಮ್ಮದ್ ಶರೀಫ್ ಅವರು ತೃತೀಯ ಬಹುಮಾನ ಪಡೆದಿರುತ್ತಾರೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.