ಸಾರ್ವಜನಿಕ ಬದುಕಿಗೆ ಎನ್ನೆಸ್ಸೆಸ್ ಪೂರಕವಾಗಿದ್ದು, ವಿದ್ಯಾರ್ಥಿಗಳು ಈ ಶಿಬಿರದ ಸದುಪಯೋಗ ಪಡೆದು ಸದ್ಗುಣಗಳೊಂದಿಗೆ ದೇಶದ ಉತ್ತಮ ನಾಗರಿಕರಾಗಿ ಬದುಕಬೇಕೆಂದು ಬಂಟ್ವಾಳ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್ ತಿಳಿಸಿದ್ದಾರೆ.
ತಾಲೂಕಿನ ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಸಿದ್ದಕಟ್ಟೆ ಸ.ಪ.ಪೂ. ಕಾಲೇಜಿನ ೨೦೧೭-೧೮ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ, ತಾಪಂ ಸದಸ್ಯ ಪ್ರಭಾಕರ್ ಪ್ರಭು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ನಿರ್ದೇಶಕ ಜಗದೀಶ್ ಕೊಯಿಲ, ಬಂಟ್ವಾಳ ಎಪಿಎಂಸಿ ಸದಸ್ಯ ಪದ್ಮರಾಜ್ ಬಲ್ಲಾಳ್, ಕ್ಷೇತ್ರ ಶೀಕ್ಷಣಾಧಿಕಾರಿ ಶಿವಪ್ರಕಾಶ್, ಕೊಯಿಲ ಸರಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ದೇವಪ್ಪ ಕರ್ಕೇರ, ಬಂಟ್ವಾಳ ರೋಟರಿ ಕ್ಲಬ್‌ನ ಅಧ್ಯಕ್ಷ ಸಂಜೀವ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.
ರಾಯಿ ಗ್ರಾಪಂ ಅಧ್ಯಕ್ಷ ಜಯಾನಂದ ಸಪಲ್ಯ, ಸಂಗಬೆಟ್ಟು ಗ್ರಾಪಂ ಅಧ್ಯಕ್ಷ ಗುಲಾಬಿ ಶೆಟ್ಟಿ, ಪಂ ಸದಸ್ಯ ಸುನಂದ, ಶೋಭಾ, ರಾಯಿ ಪಂಚಾಯತ್‌ನ ಮಾಜಿ ಸದಸ್ಯ ರಾಮಸಿಂದರ ಗೌಡ, ಶಾಲಾ ಮುಖ್ಯೋಪಾಧ್ಯಾಯ ಸುಧೀರ್ ಜಿ. ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ಸುರೇಂದ್ರ ವೇದಿಕೆಯಲ್ಲಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಶೀನಪ್ಪ ಎನ್. ಸ್ವಾಗತಿಸಿ, ಶಾರದಾ ವಂದಿಸಿದರು. ಉಪನ್ಯಾಸಕ ಸಂಜಂಯ್ ಬಿ.ಎನ್ ನಿರೂಪಿಸಿದರು.
Be the first to comment on "ಸಾರ್ವಜನಿಕ ಬದುಕಿಗೆ ಎನ್ನೆಸ್ಸೆಸ್ ಪೂರಕ: ಮಾಯಿಲಪ್ಪ ಸಾಲಿಯಾನ್"