ಭಾಷೆ ಕೇವಲ ಒಂದು ಸಂವಹನ ಮಾಧ್ಯವಾಗಿರದೆ, ಅದು ಸಮುದಾಯದ ಒಗ್ಗಟ್ಟಿಗೆ ಮೂಲ ಕಾರಣವಾಗಿ ಗುರುತಿಸಿಕೊಳ್ಳುತ್ತಿದೆ ಎಂದು ಸಾಹಿತಿ ಚಂದ್ರಶೇಖರ ಪಾತೂರು ಹೇಳಿದರು.
ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಹಾಗೂ ದಫ್ ಎಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇವುಗಳ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡಿನ ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ನಡೆದ ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕೇವಲ ಅಕಾಡೆಮಿಯಂತಹ ಸರಕಾರಿ ಮಾನ್ಯತೆಯಿಂದ ಮಾತ್ರ ಭಾಷೆಯ ಅಭಿವೃದ್ದಿ ಸಾಧ್ಯವಿಲ್ಲ. ಭಾಷೆಯನ್ನು ಸಮಾಜದಲ್ಲಿ ಹೆಚ್ಚು ಪ್ರಸ್ತುತಪಡಿಸಿದಾಗ ಭಾಷೆ ಹೆಚ್ಚು ಅಭಿವೃದ್ದಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ಎಂ. ಪ್ರೇಮಿ ಡಿ’ಸೋಜ, ಮಂಗಳೂರು ಹಿದಾಯ ಫೌಂಡೇಶನ್ ಸಂಚಾಲಕ ಹಾಜಿ ಜಿ. ಮುಹಮ್ಮದ್ ಹನೀಫ್, ಬಂಟ್ವಾಳ ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಉಪನ್ಯಾಸಕರಾದ ಅಬ್ದುಲ್ ರಝಾಕ್ ಅನಂತಾಡಿ, ಬಿ. ರಾಮಚಂದ್ರ ರಾವ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಎ. ಗೋಪಾಲ ಅಂಚನ್, ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಝಕರಿಯ್ಯಾ ಕಲ್ಲಡ್ಕ ಭಾಗವಹಿಸಿದ್ದರು.
ಬಂಟ್ವಾಳ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಎಸ್. ಮಾವೆ, ಮೆಸ್ಕಾಂ ಬಂಟ್ವಾಳ ಶಾಖೆಯ ಸಲಹಾ ಸಮಿತಿ ಸದಸ್ಯರಲ್ಲೋರ್ವರಾದ ವೆಂಕಪ್ಪ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಆಲ್ಬರ್ಟ್ ಮೆನೇಜಸ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಮಹೇಶ್ ನಾಯಕ್ ಖಂಡಿಗ, ಪರಿಷತ್ ಕೋಶಾಧಿಕಾರಿ ಎಸ್. ಮುಹಮ್ಮದ್ ಅಲಿ ಶಾಂತಿಂಗಡಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು, ಪರಿಷತ್ ಪದಾಧಿಕಾರಿಗಳಾದ ಸುಲೈಮಾನ್ ಸೂರಿಕುಮೇರು, ಯೂಸುಫ್ ಕರಂದಾಡಿ, ಎ.ಕೆ. ಹಾರಿಸ್ ಮಂಚಿ, ಕೆ.ಎಸ್. ಮುಹಮ್ಮದ್ ಕಡೇಶ್ವಾಲ್ಯ, ಯೂಸುಫ್ ಬಾಂಬಿಲ, ಎ.ಎಸ್. ಶರೀಫ್ ಶಾಂತಿಅಂಗಡಿ ಮೊದಲಾದವರು ಉಪಸ್ಥಿತರಿದ್ದರು.
ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬ್ದುಲ್ ಲತೀಫ್ ನೇರಳಕಟ್ಟೆ ಸ್ವಾಗತಿಸಿ, ದಫ್ ಎಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು ವಂದಿಸಿದರು. ಪರಿಷತ್ ಪತ್ರಿಕಾ ಕಾರ್ಯದರ್ಶಿ ಫಾರೂಕ್ ಗೂಡಿನಬಳಿ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹೊರತಂದ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟು ಪುಸ್ತಕವನ್ನು ಸಾಹಿತಿ ಚಂದ್ರಶೇಖರ ಪಾತೂರು ಅವರು ಬಂಟ್ವಾಳ ಗ್ರಂಥಾಲಯದ ಗ್ರಂಥಪಾಲಕಿ ಲಲಿತಾ ಅವರಿಗೆ ಹಸ್ತಾಂತರಿಸಿದರು. ಕಣ್ಣೂರು-ಕುಂಡಾಲದ ಜನ್ನತುಲ್ ಉಲೂಂ ದಫ್ ತಂಡದ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ನಡೆಯಿತು.
ಬಳಿಕ ಬಹುಭಾಷಾ ಕವಿ ಮುಹಮ್ಮದ್ ಬಡ್ಡೂರು ಅಧ್ಯಕ್ಷತೆಯಲ್ಲಿ ಬ್ಯಾರಿ ಕವಿಗೋಷ್ಠಿ ನಡೆಯಿತು. ಕ್ಯಾರಿಯರ್ ಗೈಡನ್ಸ್ ಸಂಚಾಲಕ ಉಮರ್ ಯು.ಎಚ್. ಗೋಷ್ಠಿಗೆ ಚಾಲನೆ ನೀಡಿದರು. ಕವಿಗಳಾದ ಅಬ್ದುಲ್ ಸತ್ತಾರ್ ಗೂಡಿನಬಳಿ, ಅಶ್ರಫ್ ಅಪೊಲೊ ಕಲ್ಲಡ್ಕ, ರಶೀದ್ ನಂದಾವರ, ಎಂ.ಪಿ. ಬಶೀರ್ ಅಹ್ಮದ್ ಬಂಟ್ವಾಳ, ಸಲೀಂ ಬೋಳಂಗಡಿ ಕವನ ವಾಚಿಸಿದರು.