ಬಂಟ್ವಾಳ ಸಮೀಪದ ಭಂಡಾರಿಬೆಟ್ಟು ಸೇತುವೆ ಬಳಿಯ ಪೊದೆಯಲ್ಲಿ ಯುವಕನೊಬ್ಬನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಅಮ್ಟಾಡಿ ಗ್ರಾಮದ ಕಾಯರ್ ಮಾರ್ ನಿವಾಸಿ ರವಿ (42) ಎಂಬವರು ಮೃತಪಟ್ಟವರಾಗಿದ್ದಾರೆ. ಯಾವುದೋ ವಾಹನ ಡಿಕ್ಕಿಯಾಗಿ ಮೃತಪಟ್ಟಿರಬೇಕು ಎಂದು ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ-ಧರ್ಮಸ್ಥಳ ಹೆದ್ದಾರಿಯ ಅಮ್ಟಾಡಿ ಗ್ರಾಮದ ಅಜೆಕಲ ಬೈಪಾಸ್ ಎಂಬಲ್ಲಿ ಕವಚಿಹಾಕಿದ ಸ್ಥಿತಿಯಲ್ಲಿ ಭಾನುವಾರ ಬೆಳಗ್ಗೆ ಪತ್ತೆಯಾಗಿತ್ತು. ಇದೀಗ
ಅಮ್ಟಾಡಿ ಗ್ರಾಮದ ಭಂಡಾರಿಬೆಟ್ಟು ರಸ್ತೆ ಬದಿಯಲ್ಲಿ ಕಾರೊಂದು ಡಿಕ್ಕಿಯಾಗಿ ನಡೆದುಕೊಡು ಹೋಗುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವುದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದುಕೊಂಡು ಬರುತ್ತಿದ್ದಾಗ ವಾಹನ ಢಿಕ್ಕಿಯಾಗಿ ತಲೆ ಗಂಭೀರ ಗಾಯವಾಗಿದ್ದು ರಕ್ತ ಸೋರಿಕೆಯಿಂದ ಮೃತಪಟ್ಟಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
ಮೃತ ರವೀಂದ್ರ ಅವರು ತಾಯಿ ಮತ್ತು ಸಹೋದರರನ್ನು ಅಗಲಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…