ಕೊನೆಗೂ ಬಂಟ್ವಾಳ ಪುರಸಭೆಗೆ ಸ್ಥಾಯಿ ಸಮಿತಿ ರಚನೆಯಾಗಿದೆ. ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆ ಈ ಪ್ರಕ್ರಿಯೆ ವಿಪಕ್ಷ ಬಿಜೆಪಿ ಬಹಿಷ್ಕಾರದೊಂದಿಗೆ ನಡೆಯಿತು.
ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂದರ್ಭ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬುಡಾ ಅಧ್ಯಕ್ಷ ಸದಾಶಿವ ಬಂಗೇರ ಉಪಸ್ಥಿತರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಸದಸ್ಯರಾಗಿ ಜಗದೀಶ್ ಕುಂದರ್, ಚಂಚಲಾಕ್ಷಿ, ಪ್ರಭಾ ಆರ್ .ಸಾಲಿಯಾನ್ (ಕಾಂಗ್ರೆಸ್), ಬಿ.ಮೋಹನ್(ಜೆಡಿಎಸ್), ಮೊನೀಶ್ ಅಲಿ(ಎಸ್. ಡಿ .ಪಿ. ಐ.) ಅವಿರೋಧವಾಗಿ ಆಯ್ಕೆಯಾದರು.
ಸಭಾಂಗಣದ ಹೊರಗೆ ವಾಸು ಪೂಜಾರಿಯವರನ್ನು ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಮಹಮ್ಮದ್ ನಂದಾವರ, ಮಲ್ಲಿಕಾ ಶೆಟ್ಟಿ ಮೊದಲಾವರು ಅಭಿನಂದಿಸಿದರು.
ಸ್ಥಾಯಿ ಸಮಿತಿ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಸದಸ್ಯರು ಬಹಿಷ್ಕರಿಸಿದ್ದರು. ಈ ಸಂದರ್ಭ ಬಿಜೆಪಿ ಸದಸ್ಯ ದೇವದಾಸ ಶೆಟ್ಟಿ ಈ ಪ್ರಕ್ರಿಯೆ ಕಾನೂನು ಬಾಹಿರ ಎಂದು ಸಲ್ಲಿಸಿದ ಆಕ್ಷೇಪ ಅರ್ಜಿಯನ್ನು ದಾಖಲಿಸಲಾಯಿತು.
Be the first to comment on "ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಾಸು ಪೂಜಾರಿ ಆಯ್ಕೆ"