ಬಂಟ್ವಾಳ

ಕೇಂದ್ರ ಸರಕಾರದ ನೀತಿ: ಕಾಂಗ್ರೆಸ್ ಪ್ರತಿಭಟನೆ

ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರ ರೈತರ ನಂಬಿಕೆಗೆ ಮೋಸ ಮಾಡುವ ಸರಕಾರ. ಸುಳ್ಳನ್ನೇ ಬಂಡವಾಳವಾಗಿಸಿ ಮೋದಿ ಅಧಿಕಾರ ಚಲಾಯಿಸುತ್ತಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಆರೋಪಿಸಿದರು.
ಕೇಂದ್ರ ಸರಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್ ಜಂಕ್ಷನ್ ಬಳಿ ಗುರುವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ರಮಾನಾಥ ರೈ, ಕೇಂದ್ರದಲ್ಲಿ ಮನಮೋಹನ್ ನೇತೃತ್ವದ ಸರಕಾರ ಇದ್ದಾಗ ಸುಮಾರು ೭೨ ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿ ಅವರು ಬಂಡವಾಳಶಾಹಿ, ರಿಲಾನ್ಸ್, ಅದಾನಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ದೊಡ್ಡ ಮೊತ್ತದ ಸಾಲ ಮನ್ನಾ ಮಾಡುವ ಮೂಲಕ ಶ್ರೀಮಂತರನ್ನು ಪುನರುತ್ಥಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಜಾಹೀರಾತು

ರೈತರಿಗೆ ಸ್ವಾಭಿಮಾನದ ಬದುಕು ನೀಡಿದ್ದು ಕಾಂಗ್ರೆಸ್, ರಾಜ್ಯದಲ್ಲಿ ಮತ್ತು ದ.ಕ. ಜಿಲ್ಲೆಯಲ್ಲಿ ಭೂಮಿಯ ಒಡೆತನ ನೀಡಿದವರು ಇಂದಿರಾ ಗಾಂಽಯವರು. ಆಶ್ರಯ ಯೋಜನೆ ಮೂಲಕ ಕನಿಷ್ಟ ಐದು ಸೆಂಟ್ಸ್ ಜಮೀನು ನೀಡಿದ್ದು ಕಾಂಗ್ರೆಸ್, ಇಂದು ೯೪ ಸಿ ಅಡಿಯಲ್ಲಿ ಬಂಟ್ವಾಳ ತಾಲೂಕಿನಲ್ಲಿ ೧೮ ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು. ಅದರಲ್ಲಿ ಅರ್ಧಕ್ಕಿಂತಲೂ ಅರ್ಜಿಗಳಿಗೆ ಮಂಜೂರಾತಿ ನೀಡಿದೆ. ಇನ್ನುಳಿದ ಅರ್ಜಿಗಳಿಗೆ ರಾಜ್ಯ ಮುಖ್ಯಮಂತ್ರಿಗಳು ಬಂಟ್ವಾಳ ಮುಂದಿನ ದಿನಗಳಲ್ಲಿ ಬರುವಾಗ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರೈತರ ಸಾಲ ಮನ್ನಾ, ಕೃಷಿಉಪಕರಣ ನೀಡಿಕೆ, ಬೆಂಬಲ ಬೆಲೆ ಹಾಗೂ ಉಚಿತ ಪಂಪ್‌ಸೆಟ್ ನೀಡುವ ಮೂಲಕ ರೈತರ ಸರ್ವತೋಮುಖ ಅಭಿವೃದ್ಧಿ ಶ್ರಮಿಸಿದೆ. ಇದರಿಂದ ರಾಜ್ಯದಲ್ಲಿ ರೈತರು ನೆಮ್ಮದಿಯ ಹಾಗೂ ಸ್ವಾಭಿಮಾನದ ಬದುಕು ರೂಪಿಸುವಂತಾಗಿದೆ ಎಂದರು.

ಕಿಸಾನ್ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಮಾತನಾಡಿ, ವಾಣಿಜ್ಯ ಬ್ಯಾಂಕ್‌ಗಳಲ್ಲಿ ಇರುವಂತಹ ರೈತರ ಸಾಲವನ್ನು ಮುಂದಿನ ಜ. ೧೫ರೊಳಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಯಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೂಲಕ ಸಾಲ ಮನ್ನಾ ಮಾಡಿಸಬೇಕು. ಇಲ್ಲದಿದ್ದರೆ ರಾಜ್ಯದ ಲಕ್ಷಾಂತರ ರೈತರು ಪಾರ್ಲಿಮೆಂಟ್‌ಗೆ ಮುತ್ತಿಗೆ ಹಾಕಲಿದ್ದಾರೆ ಎಂದರು.
ಸಾಕಷ್ಟು ಮಂದಿ ರೈತರು ಸಾಲ ಮರುಪಾವತಿ ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಭಾಗದ ರೈತರಲ್ಲಿ ಮಾತನಾಡಿದಾಗ ಸ್ವಾಮಿ ನಮ್ಮಲ್ಲಿ ದುಡ್ಡಿಲ್ಲ, ದುಡಿಯಲು ಕೆಲಸ ಇಲ್ಲ ಆದರು ನಾವು ಜೀವಂತ ಬದುಕಿದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ರೂ.ಗೆ ನೀಡಿದ ಅಕ್ಕಿಯಿಂದ ಅದರ ಅನ್ನ ತಿಂದು ಬದುಕಿದ್ದೇವೆ ಎಂದಿದ್ದಾರೆ. ಬಿಜೆಪಿಯವರು ವಾಣಿಜ್ಯ ಬ್ಯಾಂಕ್‌ನಲ್ಲಿ ಹೊಂದಿರುವ ರೈತರ ಸಾಲ ಮನ್ನಾ ಮಾಡಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕೋಮುಗಳ ನಡುವೆ ವಿಷಬೀಜ ಬಿತ್ತುವ ಮೂಲಕ ಕೊಮುಗಲಭೆಯನ್ನು ನಡೆಸುತ್ತಿದೆ. ಮೋದಿ ಅವರ ಅಚ್ಚೇದಿನ ಶ್ರೀಮಂತ್ರರಿಗೆ ಬಂದಿದೇ ಹೊರತು ಬಡವರಿಗಲ್ಲ ಎಂದ ಅವರು, ಮೋದಿ ಅವರು ದೇಶದ ಆರ್ಥಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿ, ದೇಶದ ಜನರನ್ನು ಅತಂತ್ರರನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಮುಂದಿನ ದಿನಗಳಲ್ಲಿ ಬರತಕ್ಕ ಚುನಾವಣೆಗೆ ಕಾರ್ಯಕರ್ತರು, ಪಕ್ಷ ನಾಯಕರು ಸಿದ್ದರಾಬೇಕು. ಜಿಲ್ಲೆಯಲ್ಲಿ ಕೋಮು ಸೌಹಾರ್ಧವನ್ನು ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ನ ನಮ್ಮ ಅಭ್ಯರ್ಥಿಗಳ ಗೆಲುವು ಆಗಲೇ ಬೇಕು ಎಂಬುದನ್ನು ಮನಗಾಣಬೇಕು ಎಂದರು.

ಜಾಹೀರಾತು

ಕಲ್ಲಡ್ಕದಲ್ಲಿ ಶಾಲಾ ಮಕ್ಕಳಿಗಾಗಿ ಇಂದು ಭಿಕ್ಷೆ ಬೇಡುತ್ತಾರಲ್ಲ, ಅವರು ಇನ್ನು ತಟ್ಟೆ ಹಿಡಿದು ಬೇಡುವ ದಿನ ಬರಲಿದೆ. ಇನ್ನೊಂದು ಜಿಲ್ಲೆಯ ದೇಗುಲದ ಹಣವನ್ನು ನೀಡುವ ಕಾನೂನು ಕ್ರಮವೇ ಇಲ್ಲ . ಇವರಿಗೆ ತಾಕತ್ತಿದ್ದರೆ ಶಾಲಾ ಶಿಕ್ಷಕರಿಗೆ ಸರಕಾರದಿಂದ ಸಂಬಳ ನೀಡುತ್ತದೆಯಲ್ಲ ಅದನ್ನು ಬೇಡ ಎಂದು ಹೇಳಲಿ.
ಮಕ್ಕಳ ಕೈಯಲ್ಲಿ ತಟ್ಟೆ ಕೊಟ್ಟು ಭಿಕ್ಷೆ ಬೇಡುವ ಬದಲು ಅವರೆ  ಭಿಕ್ಷೆ ಬೇಡಲಿ. ಭಿಕ್ಷೆ ಬೇಡಲು ಇದು ಅವರಿಗೆ ಸರಿಯಾದ ಸಮಯ ಎಂದು ರಮಾನಾಥ ರೈ ಟೀಕಿಸಿದರು.

ಜಿಲ್ಲಾ ಕಿಸಾನ್ ಘಟಕ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪ್ರ. ಕಾರ್ಯದರ್ಶಿ ಗೋವರ್ಧನ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎ.ಎಸ್.ಮಹಮ್ಮದ್, ಬಿ. ಪದ್ಮಶೇಖರ ಜೈನ್, ಮಂಜುಳಾ ಮಾವೆ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರುಗಳಾದ ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್, ಎಸ್‌ಸಿ ವಿಭಾಗ ಅಧ್ಯಕ್ಷ ಜನಾರ್ದನ ಚಂಡ್ತಿಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕುಲಾಲ್, ಪ್ರಮುಖರಾದ ಪದ್ಮನಾಭ ನರಿಂಗಾನ, ಪುರಸಭಾ ಉಪಾದ್ಯಕ್ಷ ಮಹಮ್ಮದ್ ನಂದರಬೆಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷ ವಾಸು ಪೂಜಾರಿ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ ಸ್ವಾಗತಿಸಿ, ವಲಯ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ