ಕರಾವಳಿಗೆ ಶಾಶ್ವತ ಮರಳು ನೀತಿಗೆ ಆಗ್ರಹಿಸಿ ಧರಣಿ

ಜಿಲ್ಲೆಯಲ್ಲಿ ತಲೆದೋರಿರುವ ಕೃತಕ ಮರಳು ಅಭಾವ ಹಾಗೂ ಮರಳು ಸಮಸ್ಯೆಗೆ ಕಾಂಗ್ರೆಸ್ಬಿಜೆಪಿ ಎರಡೂ ಪಕ್ಷಗಳ ಜನವಿರೋಧಿ ಧೋರಣೆಗಳೇ ಕಾರಣ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ಕೃತಕ ಮರಳು ಅಭಾವ, ಕರಾವಳಿಗೆ ಶಾಶ್ವತ ಮರಳು ನೀತಿಗಾಗಿ ಹಾಗೂ ಅಕ್ರಮ ಮರಳು ಸಾಗಾಟ ನಿಲ್ಲಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಡಬ್ಲ್ಯುಎಫ್) ಹಾಗೂ ಸಿಐಟಿಯು ಜಂಟಿಯಾಗಿ ಬಿ. ಸಿ.ರೋಡಿನಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಜಾನ್, ಸಿಐಟಿಯು ಮುಖಂಡರಾದ ರಾಮಣ್ಣ ವಿಟ್ಲ, ಉದಯ ಕುಮಾರ್, ಬಿ. ವಾಸು ಗಟ್ಟಿ, ಶೇಖರ ಕಟ್ಟತ್ತಿಲ, ಕೃಷ್ಣ ಸುಳ್ಯ, ಯಾದವ ಮೊದಲಾದವರು ಪ್ರತಿಭಟನೆಯಲ್ಲಿದ್ದರು. ಪ್ರತಿಭಟನೆಗೂ ಮುನ್ನ ಬಿ.ಸಿ.ರೋಡು ಮುಖ್ಯ ವೃತ್ತದಿಂದ ಕಾಲ್ನಡಿಗೆ ಜಾಥಾ ನಡೆಸಲಾಯಿತು. ಬಳಿಕ ತಾಲೂಕು ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರಾವಳಿಗೆ ಶಾಶ್ವತ ಮರಳು ನೀತಿಗೆ ಆಗ್ರಹಿಸಿ ಧರಣಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*