ತಾಲ್ಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಆಲಂಪುರಿ ಎಂಬಲ್ಲಿ ಸುಮಾರು 40 ಎಕರೆ ಗೋಮಾಳ ಸಹಿತ ಸರ್ಕಾರಿ ಜಮೀನಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಸುಸಜ್ಜಿತ ’ಟ್ರೀ ಪಾರ್ಕ್’ ನಿರ್ಮಿಸಿ ಬಳಿಕ ಅದನ್ನು ಪ್ರವಾಸಿ ತಾಣವಾಗಿ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ತಾಲ್ಲೂಕಿನ ವಗ್ಗದಲ್ಲಿ ಅರಣ್ಯ ಇಲಾಖೆ ವಿಶೇಷ ಘಟಕ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ್ ಮತ್ತು ಸ್ಟೌವ್ ವಿತರಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ಮುಂದಿನ ಡಿಸೆಂಬರ್ ತಿಂಗಳಿಗೆ ಸರ್ಕಾರದ ವತಿಯಿಂದ ’ಅನಿಲ ಭಾಗ್ಯ’ ಯೋಜನೆ ಸಹಿತ ಪ್ರತೀ ತಾಲ್ಲೂಕು ಕೇಂದ್ರಗಳಲ್ಲಿ ’ಇಂದಿರಾ ಕ್ಯಾಂಟೀನ್’ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದರು.
ಇದೇ ವೇಳೆ ಪ್ರವಾಸೋದ್ಯಮ ಇಲಾಖೆ ಯೋಜನೆಯಡಿ ಕಾರಿಂಜ ಕ್ಷೇತ್ರ -ಅಲ್ಲಿಪಾದೆ ರಸ್ತೆಗೆ ರೂ.೬೫ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ಸದಸ್ಯೆ ಸ್ವಪ್ನ ವಿಶ್ವನಾಥ ಪೂಜಾರಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಕಾರಿಂಜ ಕ್ಷೇತ್ರದ ಧರ್ಮದರ್ಶಿ ಪಿ.ಜಿನರಾಜ ಅರಿಗ, ಕಾವಳಮೂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಪೂಂಜ, ಕಾವಳಪಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಪ್ರಮೋದ್ ಕುಮಾರ್ ರೈ, ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವೈ.ಉಮೇಶ್ ಭಟ್, ಗ್ಯಾಸ್ ವಿತರಕ ಜಗನ್ನಾಥ ಚೌಟ, ಪ್ರಮುಖರಾದ ಜನಾರ್ದನ ಚಂಡ್ತಿಮಾರ್, ಉದಯ ಹೆಗ್ಡೆ ಬೆಂಗಳೂರು ಮತ್ತಿತರರು ಇದ್ದರು.
ಚಂದ್ರಶೇಖರ ಮಧ್ವ ಸ್ವಾಗತಿಸಿ, ವಲಯ ಅರಣ್ಯಾಕಾರಿ ಬಿ.ಸುರೇಶ್ ವಂದಿಸಿದರು. ಆದಿರಾಜ್ ಜೈನ್ ಅಲ್ಲಿಪಾದೆ ಕಾರ್ಯಕ್ರಮ ನಿರೂಪಿಸಿದರು.
Be the first to comment on "40ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಾಣ"