ಭಾರತೀಯ ಔಷಧಿ ಪದ್ದತಿಯಾದ ಆಯುರ್ವೇದದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಆಯುಷ್ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್‌ಜೆಎಸ್‌ಆರ್‌ವೈ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಔಷಧೀಯ ಗುಣಗಳುಳ್ಳ ಗಿಡಮೂಲಿಕೆಗಳನ್ನು ರಕ್ಷಿಸಬೇಕಾಗಿದೆ. ಸರಕಾರವೂ ಭಾರತೀಯ ವೈದ್ಯ ಪದ್ದತಿಗೆ ಹೆಚ್ಚಿನ ಗಮ,ನ ನೀಡುತ್ತಿದೆ ಎಂದರು.
ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಮುಖ್ಯಾಧಿಕಾರಿ ರೇಖಾ ಶೆಟ್ಟಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ತಹಶೀಲ್ದಾರ್ ಪುರಂದರ ಹೆಗ್ಡೆ ಅತಿಥಿಗಳಾಗಿ ಭಾಗವಹಿಸಿದ್ದರು.