ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 22ರಂದು ಬಂಟ್ವಾಳಕ್ಕೆ ಆಗಮಿಸಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತಾ ಸಭೆ ಬಿ.ಸಿ.ರೋಡಿನಲ್ಲಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ವಿವಿಧ ಕಾರ್ಯಕ್ರಮಗಳ ಯಶಸ್ಸಿಗೆ ಸಹಕಾರವನ್ನು ಸಚಿವರು ಕೋರಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಎಎಸ್ಪಿ ಡಾ.ಅರುಣ್ ಸಭೆಯಲ್ಲಿದ್ದು ಸಲಹೆ ಸೂಚನೆ ನೀಡಿದರು.
ಇದಕ್ಕೂ ಮೊದಲು ಸಚಿವ ರೈ ಮತ್ತು ಅಧಿಕಾರಿಗಳು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಡೆಯುವ ವೇದಿಕೆ, ಸಭಾಂಗಣದ ಸಿದ್ಧತೆಯ ಹಾಗೂ ಮಿನಿ ವಿಧಾನಸೌಧದ ಪರಿಶೀಲನೆ ನಡೆಸಿದರು. ಈ ಸಂದರ್ಭ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯುಸ್ ಎಲ್. ರೋಡ್ರಿಗಸ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ಇಂಜಿನಿಯರುಗಳಾದ ಅರುಣ್ ಪ್ರಕಾಶ್ ಸಹಿತ ಇಲಾಖೆಯ ಸಿಬ್ಬಂದಿ ಮಾಹಿತಿ ನೀಡಿದರು.