ಜೆಸಿಐ ಬಂಟ್ವಾಳದ ವತಿಯಿಂದ ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯ ಮಕ್ಕಳೊಂದಿಗೆ ಗುರುವಾರ ರಾತ್ರಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.
ವಸತಿ ಶಾಲೆಯ ಪುಟಾಣಿಗಳು ದೀಪಗಳನ್ನು ಹಚ್ಚಿ, ಪಟಾಕಿ ಸಿಡಿಸಿ ಖುಷಿ ಪಟ್ಟರು. ಮಕ್ಕಳ ಸಂಭ್ರಮ ನೆರೆದವರ ಮನಸ್ಸಿನಲ್ಲಿ ದೀಪಾವಳಿಯ ಸಡಗರವನ್ನು ಇಮ್ಮಡಿಗೊಳಿಸಿತು.
ಈ ವಸತಿ ಶಾಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೀಪಾವಳಿ ರಜೆಯ ಹಿನ್ನಲೆಯಲ್ಲಿ ಕೆಲ ವಿದ್ಯಾರ್ಥಿಗಳು ಊರಿಗೆ ತೆರಳಿದ್ದರೆ ಇನ್ನೂ ಅನೇಕ ವಿದ್ಯರ್ಥಿಗಳು ವಸತಿ ಶಾಲೆಯಲ್ಲಿಯೇ ಉಳಿದಿದ್ದು ದೀಪಾವಳಿ ಹಬ್ಬದ ಸಂಭ್ರಮದಿಂದ ವಂಚಿತರಾಗಿದ್ದರು. ಇದನ್ನು ಮನಗಂಡ ಜೇಸಿಐ ಬಂಟ್ವಾಳದ ಸದಸ್ಯರು ಒಂದು ದಿನದ ದೀಪಾವಳಿ ಹಬ್ಬವನ್ನು ವಸತಿ ಶಾಲೆಯ ಮಕ್ಕಳೊಂದಿಗೆ ಆಚರಿಸಿ ಅವರಿಗೂ ದೀಪಾವಳಿಯ ಸಡಗರ ಹಂಚಿದರು. ಪಟಾಕಿ ಸಿಡಿಸಿ, ಸಿಹಿ ತಿಂದು, ಕುಣಿದು ಕುಪ್ಪಳಿಸಿದರು. ಜೇಸಿ ಅಧ್ಯಕ್ಷ ಬಾಲಕೃಷ್ಣ ಅಗ್ರಬೈಲು ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಸತಿ ಶಾಲೆ ಮಕ್ಕಳೊಂದಿಗೆ ದೀಪಾವಳಿ ಸಂಭ್ರಮ"
Be the first to comment on "ವಸತಿ ಶಾಲೆ ಮಕ್ಕಳೊಂದಿಗೆ ದೀಪಾವಳಿ ಸಂಭ್ರಮ"