ಬಂಟ್ವಾಳ

ನಮ್ಮ ಬಂಟ್ವಾಳ ಬಳಗದಿಂದ ವೆಬ್ ಸೈಟ್ ಆರಂಭ

ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ  ನಮ್ಮ ಬಂಟ್ವಾಳ ಡಾಟ್ ಕಾಮ್ ವೆಬ್ ಸೈಟ್ ಅನ್ನು ರಾಜ್ಯ ಅರಣ್ಯ,ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ದೀಪಬೆಳಗಿಸಿ ಉದ್ಘಾಟಿಸಿದರು.

ಜಾಹೀರಾತು

ಜಾಲ ತಾಣವನ್ನು ಚಾಲನೆಗೊಳಿಸಿ ಮಾತನಾಡಿದ ಅವರು ಸಾಮಾಜಿಕ ವ್ಯವಸ್ಥೆಗಳನ್ನು ಸುಧಾರಣೆ ಮಾಡುವಂತಹ ಜವಾಬ್ದಾರಿ ಮಾಧ್ಯಮಗಳಿವೆ, ಈ ನಿಟ್ಟಿನಲ್ಲಿ ನಮ್ಮ ಬಂಟ್ವಾಳ ಡಾಟ್ ಕಾಮ್ ಉತ್ತಮವಾಗಿ ಕಾರ್ಯನಿರ್ವಹಿಸುವಂತಾಗಲಿ ಎಂದರು.

ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನಮ್ಮ ಬಂಟ್ವಾಳ ಡಾಟ್ ಕಾಮ್ ವೆಬ್ಸೈಟ್ ನ ಲೋಗೋ ಅನಾವರಣಗೊಳಿಸಿದರು. ಈ ಸಂದರ್ಭ ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ, ಚಂದ್ರಪ್ರಕಾಶ್ ಶೆಟ್ಟಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಸದಸ್ಯರಾದ ವಾಸು ಪೂಜಾರಿ, ಗಂಗಾಧರ್, ಪ್ರಮುಖರಾದ ಓಂಪ್ರಸಾದ್, ವಿಶ್ವನಾಥ ಬಂಟ್ವಾಳ, ವಿಶ್ವನಾಥ ಪೂಜಾರಿ ಗಾಣದಪಡ್ಪು, ವೆಂಕಪ್ಪ ಪೂಜಾರಿ, ನಝೀರ್ ಮಠ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಯಶು ವಿಟ್ಲ, ಮಂಜು ವಿಟ್ಲ, ಪ್ರವೀಣ್ ಅಂಚನ್ ತುಪ್ಪೆಕಲ್ಲು, ಗೀತಾಂಜಲಿ ಪ್ರಶಾಂತ್ ಪುಂಜಾಲಕಟ್ಟೆ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯಸ್ಥ ಪ್ರಶಾಂತ್ ಪುಂಜಾಲಕಟ್ಟೆ ಸ್ವಾಗತಿಸಿದರು, ಶಿಕ್ಷಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts