ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಗಳು ಇಂದು ದೊರೆಯುತ್ತಿವೆ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಮತ್ತು ತಾಲೂಕು ಬಾಲಭವನ ಸಮಿತಿ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ 2017ನೇ ಸಾಲಿನ ತಾಲೂಕು ಮಟ್ಟದ ಕಲಾಶ್ರೀ ಪ್ರಶಸ್ತಿ ಶಿಬಿರ ಬಿಸಿರೊಡಿನ ಸ್ತ್ರೀಶಕ್ತಿ ಭವನದಲ್ಲಿ ನಡೆಯಿತು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಢಿ ಮಕ್ಕಳ ಪ್ರತಿಭೆಯನ್ನು ಪ್ರದರ್ಶಿಸಿಸಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ ವಿದ್ಯಾರ್ಥಿಗಳು ಶಿಸ್ತಿನ ಜೀವನ ನಡೆಸಿದರೆ ಭವಿಷ್ಯಕ್ಕೆಸಹಕಾರಿ ಎಂದು ತಿಳಿಸಿದರು.
ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷೀ ಸಿ ಬಂಗೇರ. ಶಿಕ್ಷಕರಾದ ರಾಮಚಂದ್ರ ರಾವ್ , ಚೆನ್ನಕೇಶವ , ಜಯಂತಿ , ವಿಠಲ ನಾಯ್ಕ , ತುಳು ಸಾಹಿತ್ಯ ಅಕಾಡಮಿ ಸದಸ್ಯ ಗೋಪಾಲ ಅಂಚನ್, ಪತ್ರಕರ್ತ ಸಂದೀಪ್ ಸಾಲಿಯಾನ್ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಸುಧಾ ಜೋಶಿ ಸ್ವಾಗತಿಸಿ ಪ್ರಸ್ತಾವಿಸಿದ ರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಬಿ.ಭಾರತಿ ಕಾರ್ಯಕ್ರಮ ನಿರೂಪಿಸಿದರು.