ಶೇ.30ರಷ್ಟು ಮಧ್ಯಂತರ ಪರಿಹಾರ ಮಂಜೂರಾತಿ, ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು, ಜಿಲ್ಲೆ ಮತ್ತು ಕೇಂದ್ರ ಸಂಘಗಳ ವತಿಯಿಂದ ಮುಖ್ಯಮಂತ್ರಿ ಮತ್ತು ಸರಕಾರಕ್ಕೆ ಬಂಟ್ವಾಳ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಮಿನಿ ವಿಧಾನಸೌಧದ ಎದುರು ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅದ್ಯಕ್ಷ ಉಮಾನಾಥ ರೈ ಮೇರಾವು ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ, ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ, ಕಾರ್ಯದರ್ಶಿ ಜಯರಾಮ್, ಹೈಸ್ಕೂಲ್ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೊಯೆಲ್ ಲೊಬೋ, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ನವೀನ್ ರೈ , ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ತೌಫೀದ್, ತಾಲೂಕು ಸರಕಾರಿ ನೌಕರರ ಸಂಘದ ಖಜಾಂಚಿ ಜನಾರ್ಧನ, ಭಡ್ತಿ ಹೊಂದಿದ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ತುಂಬೆ , ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಸಂತೋಷ್ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ ಮೂಲಕ ಮನವಿ ಸಲ್ಲಿಸಲಾಯಿತು.