ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ದ.ಕ. ಸಿಇಎನ್ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ.
ಜಾಹೀರಾತು
ಬಂಟ್ವಾಳ ತಾಲೂಕಿನ ವಗ್ಗ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳಿಂದ ಗಾಂಜಾ ಸಹಿತ ಅಂದಾಜು 20 ಸಾವಿರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳ್ತಂಗಡಿ ತಾಲೂಕಿನ ಕೊಳ್ಪತ್ತಬೈಲು ನಿವಾಸಿ ಮಹಮ್ಮದ್ ಹಮ್ರಾಝ್(20) ಹಾಗೂ ಕಾವಳಪಡೂರು ಗ್ರಾಮದ ಬರ್ಕಟ ನಿವಾಸಿ ನಾಸೀರ್ ಅಹಮ್ಮದ್ (30) ಬಂಧಿತರು.
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಚರಣೆ ಆರೋಪಿಗಳನ್ನು ಸೆರೆ ಹಿಡಿದಾಗ ೩ ಸಾವಿರ ರೂಪಾಯಿ ಮೌಲ್ಯದ 88 ಗ್ರಾಂ ಗಾಂಜಾ ಪತ್ತೆಯಾಗಿದೆ. ಆರೋಪಿಗಳು ಗಾಂಜಾ ಸಾಗಟಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ರೆಡ್ಡಿ ಮಾರ್ಗದರ್ಶನದಂತೆ ಸಿಇಎನ್ ವಿಶೇಷ ಘಟಕದ ಸಿಐ ತಾರಾನಾಥ ಅವರ ನಿರ್ದೆಶನದಂತೆ ಎಸೈ ಉಮೇಶ್, ಸಿಬ್ಬಂದಿಗಳಾದ ಅಜಿತ್, ನವೀನ್, ತಿಲಕ್ ಹಾಗೂ ಪ್ರದೀಪ್ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಗಳ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಗಾಂಜಾ ಮಾರಾಟ: ಇಬ್ಬರ ಸೆರೆ"
Be the first to comment on "ಗಾಂಜಾ ಮಾರಾಟ: ಇಬ್ಬರ ಸೆರೆ"