ಪ್ರಣಾಳಿಕೆಯಲ್ಲಿ ನೀಡಿದ 165 ಭರವಸೆಗಳ ಪೈಕಿ 155 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ, ಮಾತ್ರವಲ್ಲದೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಚುನಾವಣಾ ಲಾಗಿದೆ. ಮುಂದಿನ ಚುನಾವಣೆಗಿಂತ ಮುನ್ನ ಪ್ರಣಾಳಿಕೆಯ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿ ಮನೆಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸೋಮವಾರ ಬೆಳಿಗ್ಗೆ ಚಾಲನೆ ನೀಡಿ ವಿವಿಧ ಮನೆಗಳಿಗೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯ ಸರಕಾರ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದನ್ನು ಪ್ರತಿ ಮನೆಗೆ ತಲುಪಿಸುವ ಹಾಗೂ ಜನರಲ್ಲಿ ತಿಳುವಳಿಕೆ ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.
ಬಂಟ್ವಾಳಕ್ಕೆ ಮುಖ್ಯಮಂತ್ರಿ ಬಂದ ಬಳಿಕ ಒಳಚರಂಡಿ ರಚನೆ ಹಾಗೂ ಕ್ರೀಡಾಂಗಣ ರಚನೆಗೆ ಅನುದಾನ ಬಿಡುಗಡೆಯಾಗಿದೆ ಮಾತ್ರವಲ್ಲದೆ ಈವರೆಗೆ ಒಟ್ಟು ಅಭಿವೃದ್ದಿ ಕಾರ್ಯಗಳಿಗೆ 1 ಸಾವಿರ ಕೋಟಿ ಅನುದಾನ ಬಂದಿರುವುದಾಗಿ ತಿಳಿಸಿದರು. ಪ್ರತೀ ಗ್ರಾಮದಲ್ಲೂ ಮನೆಮನೆ ಕಾಂಗ್ರೆಸ್ ಕಾರ್ಯಕ್ರಮ ನಡೆಯುತ್ತಿದ್ದು ಕಳ್ಳಿಗೆ ಗ್ರಾಮದ ಜವಬ್ದಾರಿಯನ್ನು ನಾನೇ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಪ್ರಮುಖರಾದ ಜನಾರ್ದನ ಚೆಂಡ್ತಿಮಾರ್, ಮಧುಸೂದನ್ ಶೆಣೈ, ದಿವಾಕರ ಪಂಬದಬೆಟ್ಟು, ವಿಜಯ ಕಳ್ಳಿಗೆ, ಚಂದ್ರಹಾಸ ಪಳ್ಳಿಪ್ಪಾಡಿ, ಪ್ರಕಾಶ್‍ಶೆಟ್ಟಿ ಝೀಟಾ ಡಿಸೋಜಾ, ಭಕ್ತ ಕುಮಾರ್ ಶೆಟ್ಟಿ, ಶಿವರಾಮ ಭಂಡಾರಿ, ಮೋಹನ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
VIDEO REPORT: