ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ನವಕರ್ನಾಟಕ ಪರಿವರ್ತನಾ ಯಾತ್ರೆ ಬಂಟ್ವಾಳ ವಿಧಾನಸಭಾ ಕ್ಷೇತ್ರವನ್ನು ನ.11ರಂದು ಪ್ರವೇಶಿಸಲಿದೆ.
ಪುಂಜಾಲಕಟ್ಟೆಯಲ್ಲಿ ಬೆಳಗ್ಗೆ 10ಕ್ಕೆ ಆಗಮಿಸುವ ರಥಯಾತ್ರೆಯನ್ನು ಸಾವಿರಾರು ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ಅಲ್ಲಿಂದ ವಗ್ಗ ಮಾರ್ಗವಾಗಿ ಬಂಟ್ವಾಳ ಪೇಟೆ ಮೂಲಕ ಸಾಗಿ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಆಗಮಿಸಿ ಬೃಹತ್ ಸಮಾವೇಶ ನಡೆಯಲಿದೆ.
ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಯಾತ್ರೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ್ದು ಹೀಗೆ.
ಈ ಸಂದರ್ಭ ರಾಷ್ಟ್ರ ಹಾಗೂ ರಾಜ್ಯದ ಪ್ರಮುಖ ನಾಯಕರುಗಳು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸುಮಾರು ಇಪ್ಪತೈದು ಸಾವಿರ ಮಿಕ್ಕಿ ಜನರು ಭಾಗವಹಿಸಲಿದ್ದು ಈ ಕಾರ್‍ಯಕ್ರಮ ಬಂಟ್ವಾಳದ ಪರಿವರ್ತನೆಗೆ ನಾಂದಿಯಾಗಲಿದೆ. ಆ ನಿಟ್ಟಿನಲ್ಲಿ ಈ ಕಾರ್‍ಯಕ್ರಮವನ್ನು ಯಶಸ್ವಿಯನ್ನಾಗಿಸುವಲ್ಲಿ ಕಾರ್‍ಯಕರ್ತರ ಪಾತ್ರ ಮಹತ್ತರವಾಗಿದೆ ಎಂದರು.
ಬಳಿಕ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಈ ಸಂದರ್ಭ ಬಿಜೆಪಿ ಮುಖಂಡರಾದ ರಾಜೇಶ್ ನಾಕ್ ಉಳಿಪ್ಪಾಡಿ, ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಪದ್ಮನಾಭಕೊಟ್ಟಾರಿ, ಸಹ ವಕ್ತಾರೆ ಸುಲೋಚನಾ ಜಿ.ಕೆ ಭಟ್, ಬ್ರಿಜೆಶ್ ಚೌಟ, ಜಿ.ಆನಂದ, ಸತೀಶ್ ಕುಂಪಲ, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಜಿ.ಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಗಣೇಶ್ ರೈ, ರಮನಾಥ ರಾಯಿ, ಸೀತರಾಮ ಪೂಜಾರಿ, ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಟೂರು, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ವಜ್ರನಾಥ ಕಲ್ಲಡ್ಕ, ವಿಜಯ ರೈ ಆಲದಪದವು, ಸೀಮಾ ಮಾದವ, ನಳಿನಿ ಬಿ.ಶೆಟ್ಟಿ, ವಸಂತ ಅಣ್ಣಳಿಕೆ, ಸಂಜೀವ ಪೂಜಾರಿ, ಆನಂದ ಶಂಬೂರು ಮತ್ತಿತರರು ಉಪಸ್ಥಿತರಿದ್ದರು.