ಪುತ್ತೂರಿನ ಬೋನಂತಾಯ ಶಿವಶಂಕರ ಭಟ್ ಮನೆಯಲ್ಲಿ ಅಪರಾಹ್ನ 2 ಗಂಟೆಗೆ ಹಾಗೂ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಸಂಜೆ 4.30ಕ್ಕೆ ಅಭಯಾಕ್ಷರ ಮತ್ತು ಅಭಯ ಗೋಯಾತ್ರೆ ಸಭೆಗಳು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ನಡೆಯಲಿದೆ.
ಪುತ್ತೂರಿನಲ್ಲಿ ಪುತ್ತೂರು, ಬೆಳ್ತಂಗಡಿ ತಾಲೂಕು ಗೋಪರಿವಾರ ಸಭೆ ಏರ್ಪಾಡಾದರೆ, ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಬಂಟ್ವಾಳ, ಮಂಗಳೂರು, ಮೂಡಬಿದ್ರೆ ತಾಲೂಕು ಗೋಪರಿವಾರ ಸಭೆ ಶ್ರೀಗಳವರ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ದ.ಕ.ಜಿಲ್ಲೆ ಗೋಪರಿವಾರ ಅಧ್ಯಕ್ಷ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಮತ್ತು ಪ್ರಧಾನ ಕಾರ್ಯದರ್ಶಿ ಮುರಲೀ ಹಸಂತಡ್ಕ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ನ.3ರಂದು ಪುತ್ತೂರು, ಕಲ್ಲಡ್ಕದಲ್ಲಿ ಗೋಪರಿವಾರ ಸಭೆ"